Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಡಿಗೆಗೆ ಕಾರು ಪಡೆದು ಮಾರಾಟ: ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಡಿಗೆಗೆ ಕಾರು ಪಡೆದು ಮಾರಾಟ: ಆರೋಪಿಯ ಬಂಧನ

    July 14, 2023
    Share

    ಮಂಗಳೂರು: ಬಾಡಿಗೆಗೆ ಕಾರು ಪಡೆದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಹರೀಶ್‌ ಯಾನೆ ಹರಿ (32) ಎಂಬಾತನನ್ನು ನಗರದ ಬಂದರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಗರದ ಫಳ್ನೀರ್ ಸಂಸ್ಥೆಯೊಂದರಿಂದ ಬಂಟ್ವಾಳದ ಯಕ್ಷಿತ್ ಎಂಬವರ ಕಾರನ್ನು ಆನ್‌ಲೈನ್ ಮೂಲಕ ಕಾಯ್ದಿರಿಸಿ, 25 ಸಾವಿರ ರೂ. ಆನ್‌ಲೈನ್ ಮೂಲಕ ಪಾವತಿಸಿದ್ದಾರೆ. ಬಾಕಿ 50 ಸಾವಿರ ರೂ. ನಗದು ನೀಡಿ ಅದರೊಂದಿಗೆ ಆಧಾರ್ ಕಾರ್ಡ್, ಚಾಲನಾ ಪರವಾನಿಗೆ ಮತ್ತು 3 ಬ್ಯಾಂಕ್‌ ಚೆಕ್‌ಗಳನ್ನು ನೀಡಿ 15 ದಿನಗಳಿಗೆ ಕಾರು ಬಾಡಿಗೆಗೆ ತೆಗೆದುಕೊಂಡು ಹೋಗಿದ್ದಎಂದುಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿತ್ತು. ಬುಕ್ಕಿಂಗ್ ಅವಧಿ ಮುಗಿದಿದ್ದರೂ ಕಾರನ್ನು ಹಿಂತಿರುಗಿಸದ ಕಾರಣ ಸಂಸ್ಥೆಯ ಮಾಲಕ ಮುಹಮ್ಮದ್ ಹುಸೈನಾ‌ರ್ ಕರೆ ಮಾಡಿದಾಗ ಆರೋಪಿಗಳು ಸ್ಪಂದಿಸಿರಲಿಲ್ಲ. ಜಿಪಿಎಸ್‌ ಮೂಲಕ ಪರಿಶೀಲಿಸಿದಾಗ ಕಾರು ವಿಜಯಪುರದಲ್ಲಿರುವುದು ಕಂಡು ಬಂದಿದೆ. ಯಕ್ಷಿತ್ ಮತ್ತು ಹರೀಶ್ ಎಂಬವರು ಆಧಾರ್ ಕಾರ್ಡ್‌ನ್ನು ನಕಲು ಮಾಡಿ ವಿಜಯಪುರದ ವ್ಯಕ್ತಿಯೊಂದಿಗೆ ಮಾರಾಟದ ಒಪ್ಪಂದ ಮಾಡಿ ಕೊಂಡು 7 ಲಕ್ಷ ರೂ. ಪಡೆದಿದ್ದರು ಎಂದು ದೂರಲಾಗಿ ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಬಂದರು ಇನ್‌ಸ್ಪೆಕ್ಟರ್ ರಾಘವೇಂದ್ರ ನೇತೃತ್ವದ ಪೊಲೀಸ್ ತಂಡ ಹರೀಶ್‌ನನ್ನು ಬಂಧಿಸಿದ್ದಾರೆ. ಇನ್ನೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ತೀವ್ರ ತನಿಖೆ ನಡೆಸುತ್ತಿದ್ದಾರೆ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.