Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ- ಓರ್ವ ಮಹಿಳೆ ಸಾವು
    ಇತ್ತೀಚಿನ ಸುದ್ದಿ

    ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ- ಓರ್ವ ಮಹಿಳೆ ಸಾವು

    June 11, 2024
    Share

    ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ‌. ಸಾವನ್ನಪ್ಪಿದ ಮಹಿಳೆ ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಎಂದು ಗುರುತಿಸಲಾಗಿದೆ. ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ಎಳೆದೊಯ್ದಿತ್ತು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಸಾವನ್ನಪ್ಪಿದ್ದಾರೆ. ಹೈದರಾಬಾದ್ ನಿಂದ 5 ಮಂದಿ ಮಹಿಳೆಯರ ತಂಡ ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿದ ತಂಡ ಇನೋವಾ ಕಾರಿನ ಮೂಲಕ ಜೂ.7 ಕ್ಕೆ ಕೊಡಗಿಗೆ ತಲುಪಿತ್ತು. ಜೂ.9 ಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶನ ನಡೆಸಿ, ನಿನ್ನೆಯಷ್ಟೇ ಧರ್ಮಸ್ಥಳ ಸಂದರ್ಶನ ನಡೆಸಿ ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಿದ್ದರು.

    Post Views: 224

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.