ಉಡುಪಿ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಮತ್ತು ಮನನೊಂದು ರಾಜೀನಾಮೆ ನೀಡುವುದು ಮುಂದುವರೆದಿದೆ.
ಮಲ್ಪೆಯ ಬೈಲಕೆರೆ ತೆಂಕನಿಡಿಯೂರು ಗ್ರಾಮದಲ್ಲಿಯೇ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿರುವ ಬೈಲಕೆರೆಯ ಬಿಜೆಪಿ ಕಾರ್ಯಕರ್ತರು, ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬೈಲಕೆರೆ, ಬಿಜೆಪಿ ಕಾರ್ಯಕರ್ತರು ಬಿಜೆಪಿಯಲ್ಲಿ ಹಲವಾರು ಸಮಯದಿಂದ ಜವಾಬ್ದಾರಿಯುತ ಕಾರ್ಯಕರ್ತರಾಗಿ ದುಡಿಯುತ್ತಿದ್ದೇವೆ. ನಾವು ಕಾರ್ಯಕರ್ತರ ನಿರಂತರ ಹತ್ಯಾಕಾಂಡದಿಂದ ಬೇಸತ್ತು, ಹಿಂದೂ ಕಾರ್ಯಕರ್ತರ ಸುರಕ್ಷತೆಯ ಬಗ್ಗೆ ಯೋಚಿಸದ ಬಿಜೆಪಿ ಸರಕಾರದಿಂದ ವಿಶ್ವಾಸ ಕಳೆದುಕೊಂಡಿರುವುದರಿಂದ ಅತ್ಯಂತ ನೋವಿನಿಂದ ಕಠಿಣ ನಿರ್ಧಾರ ತೆಗೆದುಕೊಂಡು ರಾಜಿನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.