ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್‌ನಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿ ಅರ್ಜಿ ವಜಾ ಮಾಡಿದೆ.
ಡಿ.19ರಂದು ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ 4,00,000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದನು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ಜ.8ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಅದರಂತೆ ಬುಧವಾರ ಈ ದಿನ ದಿನಾಂಕ 08.01.2025 ರಂದು ನ್ಯಾಯಾಧೀಶೆ ಸಂಧ್ಯಾ ಎಸ್ ಅವರು ವಿಚಾರಣೆ ನಡೆಸಿ, ಆರೋಪಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿರವರು ವಾದಿಸಿರುತ್ತಾರೆ.
ಆರೋಪಿ ಅಧಿಕಾರಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ ಎಂಬುದಾಗಿ ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ನಟರಾಜ ಎಂ.ಎ. ತಿಳಿಸಿದ್ದಾರೆ.