Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣ ಸಾವು

    July 30, 2024
    Share

    ಮಂಗಳೂರು: ನಗರದ ನಂತೂರು ಪದವು – ಜಂಕ್ಷನ್ ನಡುವಿನ ಎನ್ಎಚ್66ನಲ್ಲಿ ಟ್ಯಾಂಕ‌ರ್ ಹರಿದು ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತಪಟ್ಟವರು. ಶಿವಾನಂದ ಶೆಟ್ಟಿ ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು. ಇವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಆಗಮಿಸುತ್ತಿದ್ದರು.

    ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಲಾರಿ ಇವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿಯವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಸ್ಥಳದಲ್ಲಿ ಅಂಥಹ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

    Post Views: 308

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.