Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಮಂಗಳೂರು ಕುಕ್ಕರ್ ಬ್ಲಾಸ್ ಪ್ರಕರಣ: ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್‌ಐಎ ದಾಳಿ, ವಿದ್ಯಾರ್ಥಿ ರಿಹಾನ್ ವಶಕ್ಕೆ
    ಇತ್ತೀಚಿನ ಸುದ್ದಿ

     ಮಂಗಳೂರು ಕುಕ್ಕರ್ ಬ್ಲಾಸ್ ಪ್ರಕರಣ: ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್‌ಐಎ ದಾಳಿ, ವಿದ್ಯಾರ್ಥಿ ರಿಹಾನ್ ವಶಕ್ಕೆ

    January 5, 2023
    Share

    ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ.

    ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದಂತ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ 7 ಎನ್‌ಐಎ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದ್ದಾರೆ.

    ಇದೀಗ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹಲವು ಮಹತ್ವದ ಮಾಹಿತಿಯನ್ನು ಕಲೆಹಾಕುವ ಕೆಲಸದಲ್ಲಿ ಎನ್‌ಐಎ ಅಧಿಕಾರಿಗಳು ನಿರತರಾಗಿರೋದಾಗಿ ತಿಳಿದು ಬಂದಿದೆ.

    ಶಾರಿಕ್ ನೀಡಿದಂತ ಮಾಹಿತಿಯ ಆಧಾರದ ಮೇಲೆ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಂತ ಉಡುಪಿ ಮೂಲಕ ವಿದ್ಯಾರ್ಥಿ ರಿಹಾನ್ ಶೇಖ್ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಈತ ಶಿವಮೊಗ್ಗದಲ್ಲಿ ನಡೆದಿದ್ದಂತ ಟ್ರಯಲ್ ಬ್ಲಾಸ್ಟ್ ಸೇರಿದಂತೆ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

    Post Views: 166

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.