Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿ ಪ್ರವಾಸೋದ್ಯಮದ ರಾಯಭಾರಿ ಸ್ಥಾನಕ್ಕೆ ರಿಷಬ್ ಶೆಟ್ಟಿ ಹೆಸರು; ಸರ್ಕಾರದ ಚಿಂತನೆಗೆ ಪರ-ವಿರೋಧ ಚರ್ಚೆ
    ಇತ್ತೀಚಿನ ಸುದ್ದಿ

    ಕರಾವಳಿ ಪ್ರವಾಸೋದ್ಯಮದ ರಾಯಭಾರಿ ಸ್ಥಾನಕ್ಕೆ ರಿಷಬ್ ಶೆಟ್ಟಿ ಹೆಸರು; ಸರ್ಕಾರದ ಚಿಂತನೆಗೆ ಪರ-ವಿರೋಧ ಚರ್ಚೆ

    June 21, 2026
    Share

    ಬೆಂಗಳೂರು: ಸ್ಯಾಂಡಲ್‌ವುಡ್ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರವಾಸೋದ್ಯಮದ ರಾಯಭಾರಿಯನ್ನಾಗಿ (ಬ್ರಾಂಡ್ ಅಂಬಾಸಿಡರ್) ನೇಮಕ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದರ ಬೆನ್ನಲ್ಲೇ ಕರಾವಳಿಯ ಪ್ರಗತಿಪರ ವಲಯ ಮತ್ತು ರಾಜಕೀಯ ಪಕ್ಷಗಳ ನಡುವೆ ಪರ-ವಿರೋಧದ ತೀವ್ರ ಚರ್ಚೆಗಳು ಆರಂಭವಾಗಿವೆ.ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ನಟ ರಿಷಬ್ ಶೆಟ್ಟಿ ಕೂಡ ಭಾಗವಹಿಸಿದ್ದರು. ಕರಾವಳಿ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವುದು, ಚಿತ್ರೀಕರಣಕ್ಕೆ ಹೆಚ್ಚಿನ ಸೌಲಭ್ಯ ನೀಡುವುದು ಹಾಗೂ ಉದ್ಯೋಗ ಸೃಷ್ಟಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ರಿಷಬ್ ಶೆಟ್ಟಿ ಅವರನ್ನು ರಾಯಭಾರಿಯನ್ನಾಗಿ ಮಾಡುವ ಸರ್ಕಾರದ ತೀರ್ಮಾನಕ್ಕೆ ಕರಾವಳಿ ಭಾಗದ ಪ್ರಗತಿಪರರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಬಲಪಂಥೀಯ ಒಲವು ಹೊಂದಿರುವ ನಟರಾಗಿದ್ದು, ಅವರಿಗೆ ಈ ಜವಾಬ್ದಾರಿ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, “ಉನ್ನತ ಅಧಿಕಾರಿಗಳು ಹಾಗೂ ಸಚಿವರ ಸಭೆಯಲ್ಲಿ ಚಿತ್ರನಟ ರಿಷಬ್ ಶೆಟ್ಟಿ ಮಾತ್ರ ಹಾಜರಿರುವುದು ಹಲವು ಪ್ರಶ್ನೆಗಳನ್ನು ಎತ್ತುತ್ತದೆ. ಮುಖ್ಯಮಂತ್ರಿಗಳು ಅವರಿಗೆ ಮಾತ್ರ ಅಷ್ಟೊಂದು ಆದ್ಯತೆ ನೀಡುತ್ತಿರುವುದಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಶಶಿಧರ್ ಹೆಮ್ಮಾಡಿ ಅವರು, “ರಿಷಬ್ ಶೆಟ್ಟಿಯನ್ನು ಪ್ರವಾಸೋದ್ಯಮದ ರಾಯಭಾರಿಯನ್ನಾಗಿ ಮಾಡಲು ಹೊರಟಿರುವುದು ಕಾಂಗ್ರೆಸ್ ಸರ್ಕಾರದ ಭಾರಿ ಸೈದ್ಧಾಂತಿಕ ದುರಂತ” ಎಂದು ಅಸಮಾಧಾನ ಹೊರಹಾಕಿದ್ದಾರೆ.ಮತ್ತೊಂದೆಡೆ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಬೆಂಬಲಿಸಿದೆ. “ರಿಷಬ್ ಶೆಟ್ಟಿ ಕರಾವಳಿ ಪ್ರವಾಸೋದ್ಯಮದ ರಾಯಭಾರಿಯಾಗಲು ಅತ್ಯಂತ ಸೂಕ್ತ ವ್ಯಕ್ತಿ. ಕರಾವಳಿಯ ಪರಂಪರೆ, ದೈವಾರಾಧನೆ ಮತ್ತು ಸಂಸ್ಕೃತಿಯನ್ನು ತಮ್ಮ ಸಿನಿಮಾಗಳ ಮೂಲಕ ಜಗತ್ತಿನಾದ್ಯಂತ ಪಸರಿಸಿದ ಅವರ ಕೊಡುಗೆ ಅಪಾರ. ಸರ್ಕಾರದ ಈ ಚಿಂತನೆ ಸ್ವಾಗತಾರ್ಹ” ಎಂದಿದ್ದಾರೆ.ಈ ಹಿಂದೆ ರಿಷಬ್ ಶೆಟ್ಟಿ ವಾಹಿನಿಯೊಂದರ ಸಂದರ್ಶನದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಳಿದ ಪ್ರಶ್ನೆಗೆ ನೋ ಕಮೆಂಟ್ಸ್ ಅಂತ ಹೇಳಿದ್ದರು, ಇದೀಗ ಅದೇ ವಿಡಿಯೋವನ್ನು ಬಳಸಿ , ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಪ್ರಾರಂಭವಾಗಿದೆ.

    Post Views: 147

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.