Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್ ಅಡಿ ಸಿಕ್ಕಿಹಾಕಿಕೊಂಡ ರೋಡ್ ರೋಲರ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್ ಅಡಿ ಸಿಕ್ಕಿಹಾಕಿಕೊಂಡ ರೋಡ್ ರೋಲರ್

    February 13, 2024
    Share

    ಬಂಟ್ವಾಳ : ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ.
    ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ನ್ನು ಲಾರಿಯಲ್ಲಿ ತುಂಬಿಸಿ ಕೊಂಡು ಹೋಗುವ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೆ ಯ ಅಡಿಭಾಗದಲ್ಲಿ ಕ್ರಾಸ್ ಮಾಡಲು ಸಾಧ್ಯವಾಗದೆ ಸಿಲುಕಿಕೊಂಡಿದೆ. ರೈಲ್ವೆಯ ಓವರ್ ಬ್ರಿಡ್ಜ್ ನ ಎತ್ತರಕ್ಕಿಂತ ಅಧಿಕ ಎತ್ತರದಲ್ಲಿ ಲಾರಿಯ ಲೋಡ್ ಮಾಡಿಕೊಂಡಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.ಘಟನೆಯಿಂದ ರೈಲ್ವೆ ಇಲಾಖೆ ಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ ‌ಅದೃಷವಶಾತ್ ಬೇರೆ ಯಾವುದೇ ವಾಹನಗಳ‌ಮೇಲೆ ಬೀಳದೆ ಇದ್ದು, ಯಾವ ಅಪಾಯಕಾರಿ ಘಟನೆ ನಡೆದಿಲ್ಲ. ಸ್ಥಳಕ್ಕೆ ರೈಲ್ವೆ ಇಲಾಖೆಯವರು ಆಗಮಿಸಿದ್ದು, ಘಟನೆಯಿಂದ ಆಗಿರುವ ನಷ್ಟಕ್ಕೆ ಪರಿಹಾರದ ಬಗ್ಗೆ ಲಾರಿಯವರಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದಯ,ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರೇನ್ ಬಳಸಿ ಲಾರಿಯನ್ನು ಬದಿಗೆ ಸರಿಸಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿದರು.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.