ಮಂಗಳೂರು: ಉಳ್ಳಾಲ ತಾಲೂಕಿನ ಕೆಸಿ ರೋಡ್ನ ಕೋಟೆಕಾರು ಬ್ಯಾಂಕ್ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಫಿಯೆಟ್ ಕಾರಿನಲ್ಲಿ ಬಂದ ದರೋಡೆಕೋರರು ಬಂದೂಕು ತೋರಿಸಿ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರನ್ನು ಬೆದರಿಸಿದ್ದಾರೆ. ಬ್ಯಾಂಕಿನಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಹಾಡಹಗಲೇ ಬ್ಯಾಂಕ್ಗೆ ನುಗ್ಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ.
ಈ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ.ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವ ಪ್ರಯತ್ನ ನಡೆಯುತ್ತಿದೆ.