Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಏಷ್ಯಾದ ಮೊದಲ ಆರ್ಥೊ ರೊಬೊಟಿಕ್ ಸರ್ಜರಿ ವ್ಯವಸ್ಥೆ ಯೆನೆಪೋಯದಲ್ಲಿ ಆರಂಭ
    ಇತ್ತೀಚಿನ ಸುದ್ದಿ

    ದಕ್ಷಿಣ ಏಷ್ಯಾದ ಮೊದಲ ಆರ್ಥೊ ರೊಬೊಟಿಕ್ ಸರ್ಜರಿ ವ್ಯವಸ್ಥೆ ಯೆನೆಪೋಯದಲ್ಲಿ ಆರಂಭ

    September 10, 2025
    Share


    ಮಂಗಳೂರು: ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ ‘ಸ್ಕೈವಾಕರ್’ ಸರ್ಜರಿಯನ್ನು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ.


    ಈ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಯೆನೆಪೋಯ ಪಾತ್ರವಾಗಿದೆ.
    ಅಮೆರಿಕದ ಮೈಕ್ರೋಸ್ಕೋಪ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಈ ಸರ್ಜರಿ ವ್ಯವಸ್ಥೆಯನ್ನು ಯೆನೆಪೋಯದಲ್ಲಿ ಆರಂಭಿಸಲಾಗಿದೆ. ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ಮತ್ತು ಮೈಕ್ರೋಸ್ಕೋಪ್ ಆರ್ಥೋಪೆಡಿಕ್ಸ್‍ನ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಡಾ.ಮುಕೇಶ್ ಪಾರ್ಮರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


    ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ ರೊಬೊಟಿಕ್ ಸರ್ಜರಿ ತಂತ್ರಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಆಗಿದೆ. ಇವೆರಡೂ ಸೇರಿಕೊಂಡು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಮಿಲಿಮೀಟರ್‍ನ ಹತ್ತನೇ ಒಂದರಷ್ಟು ಮಟ್ಟದ ನಿಖರತೆಯನ್ನು ನೀಡುತ್ತವೆ. ಈ ತಂತ್ರಜ್ಞಾನವು ರೋಗಿಯ ನಿರ್ದಿಷ್ಟ ದೇಹರಚನೆಯನ್ನು ಆಧರಿಸಿ, ಪ್ರತಿಯೊಬ್ಬರಿಗೂ ಅವರಿಗೆ ಅಗತ್ಯವಿರುವ ರೀತಿಯಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ಪೂರೈಸುತ್ತದೆ ಎಂದು ವಿವರಿಸಿದರು.
    ಈ ಸೌಲಭ್ಯದಿಂದಾಗಿ ಮಂಡಿ ಬದಲಾವಣೆಯ ಬಳಿಕ ರೋಗಿಗಳು ಬಹಳ ಬೇಗ ಚೇತರಿಸಿಕೊಂಡು, ಸುದೀರ್ಘ ಅವಧಿಯವರೆಗೆ ಯಾವುದೇ ನೋವಿಲ್ಲದೆ ಮೊದಲಿನಂತೆ ಕೆಲಸ ಕಾರ್ಯಗಳನ್ನು ಮಾಡಬಹುದಾಗಿದೆ.

    ದೀರ್ಘ ನಡಿಗೆ, ಮೆಟ್ಟಿಲು ಹತ್ತಿಳಿಯುವುದು, ಕುಳಿತು-ಎದ್ದು ಮಾಡುವುದು ಹೀಗೆ ಪ್ರತಿಯೊಂದು ಕೆಲಸವನ್ನೂ ಮೊದಲಿನಂತೆ ಮಾಡುವ ಸ್ಥಿತಿಸ್ಥಾಪಕತ್ವವನ್ನು ಈ ಶಸ್ತ್ರಚಿಕಿತ್ಸೆ ನೀಡುತ್ತದೆ ಎಂದು ಹೇಳಿದರು.
    ಯೆನೆಪೋಯ ಆಸ್ಪತ್ರೆಯ ಮುಖ್ಯ ಆರ್ಥೋಪೆಡಿಕ್ ಹಾಗೂ ಮಂಡಿ ಬದಲಾವಣೆ ಸರ್ಜನ್ ಡಾ.ದೀಪಕ್ ರೈ ಅವರು ಭಾರತದ ಮೊದಲ ಸ್ಕೈವಾಕರ್ ಸರ್ಜರಿಯನ್ನು ಯೆನೆಪೋಯದಲ್ಲಿ ಈಗಾಗಲೇ ಯಶಸ್ವಿಯಾಗಿ ನೆರವೇರಿಸಿದ್ದು,
    ಈ ವ್ಯವಸ್ಥೆಯು ಮಂಡಿಯ ಸಹಜ ಚಲನೆಗೆ ಬೇಕಾದ ನಿಖರತೆಯನ್ನು ಒದಗಿಸುತ್ತದೆ ಎಂದು ವಿವರಿಸಿದರು.

    Post Views: 125

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.