Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ:  ಗ್ರಾಮ ಪಂಚಾಯತ್‌ ನಲ್ಲಿ ರಾಡ್ ಕಳವು-ಮೂವರು ಆರೋಪಿಗಳ ಬಂಧನ..!
    ಇತ್ತೀಚಿನ ಸುದ್ದಿ

    ಬಂಟ್ವಾಳ:  ಗ್ರಾಮ ಪಂಚಾಯತ್‌ ನಲ್ಲಿ ರಾಡ್ ಕಳವು-ಮೂವರು ಆರೋಪಿಗಳ ಬಂಧನ..!

    June 10, 2023
    Share

    ಬಂಟ್ವಾಳ: ಗ್ರಾಮ ಪಂಚಾಯತ್‌ನ ಕಟ್ಟಡ ಕಾಮಗಾರಿಗಾಗಿ ದಾಸ್ತಾನು ಇರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದೆ. ಸರಪಾಡಿ ಪೆರ್ಲ ದರ್ಖಾಸು ನಿವಾಸಿ  ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ , ಅಲ್ಲಿಪಾದೆ ಪುರುಷೋತ್ತಮ ಮೂವರು ಬಂಧಿತ ಆರೋಪಿಗಳು.

    ಆರೋಪಿಗಳು ಅಮ್ಟಾಡಿ ಗ್ರಾಮಪಂಚಾಯತ್ ನಲ್ಲಿ ನಡೆಯತ್ತಿದ್ದ ಕಟ್ಟಡ ಕಾಮಗಾರಿಗೆಂದು ತಂದು ದಾಸ್ತಾನು ಮಾಡಲಾಗಿದ್ದ ಕಬ್ಬಿಣದ ರಾಡ್ ಗಳನ್ನು ಮಾರ್ಚ್ ತಿಂಗಳಿನ 18 ರಂದು ಕಳವು ಮಾಡಿದ್ದರು. ಕಟ್ಟಡ ಕಾಮಗಾರಿ ನಡೆಸಲು ತಂದಿರಿಸಿದ ಕಬ್ಬಿಣದ ಸೊತ್ತುಗಳು ಕಳವಾದ ಬಗ್ಗೆ ಇಲ್ಲಿನ ಪಿಡಿಒ ರವಿ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬಳಿಕ ಪೋಲಿಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ಎಸ್.ಐ.ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಮೊಡಂಕಾಪು ಎಂಬಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಸಂಶಯಾಸ್ಪದ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಸಮರ್ಪಕವಾಗಿ ಉತ್ತರ ನೀಡದ ಚಾಲಕ ಸಹಿತ ವಾಹನದಲ್ಲಿದ್ದ ಮೂವರನ್ನು ವಿಚಾರ ನಡೆಸಿದಾಗ ಅಮ್ಟಾಡಿಯಲ್ಲಿ ಕಳ್ಳತನ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನೇತ್ರತ್ವದ ರಾಮಕೃಷ್ಣ ಅವರ ತಂಡ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಗಳಿಂದ 70 ಸಾವಿರ ಮೌಲ್ಯದ 600 ಕೆ.ಜಿ.ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.