Facebook Twitter Instagram
    Thursday, November 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ
    ಇತ್ತೀಚಿನ ಸುದ್ದಿ

    ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ

    November 5, 2026
    Share

    ಬೆಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕರ್ನಾಟಕದ ರಾಜಧಾನಿಯಲ್ಲಿ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದೆ. ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯ ಸ್ಯಾಂಕಿ ರಸ್ತೆ ಕ್ರಾಸ್‌ನಲ್ಲಿರುವ ದಿ ಕನ್ನಿಂಗ್‌ಹ್ಯಾಮ್ ಕಮರ್ಷಿಯಲ್‌ನ ಮೊದಲ ಮಹಡಿಯಲ್ಲಿ ಸ್ಥಾಪಿಸಲಾಗಿರುವ ನೂತನ ಕಚೇರಿಯನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರು ದೇಶದ ಪ್ರಮುಖ ಉದ್ಯಮ ಮತ್ತು ಹೂಡಿಕೆ ಕೇಂದ್ರವಾಗಿ ಬೆಳೆಯುತ್ತಿದ್ದು, ವಿವಿಧ ಕ್ಷೇತ್ರಗಳ ಉದ್ಯಮಿಗಳು ಮತ್ತು ಹೂಡಿಕೆದಾರರಿಗೆ ವಿಫುಲ ಅವಕಾಶಗಳನ್ನು ಒದಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ರೋಹನ್ ಕಾರ್ಪೋರೇಶನ್ ಬೆಂಗಳೂರಿಗೆ ಪ್ರವೇಶಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಸಂಸ್ಥೆಯ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದರು.

    ರೋಹನ್ ಕಾರ್ಪೋರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ ಮಾತನಾಡಿ, ಬೆಂಗಳೂರಿನಲ್ಲಿ ಕಚೇರಿ ಆರಂಭಿಸಿರುವುದು ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಇಲ್ಲಿನ ಗ್ರಾಹಕರಿಗೆ ಸಂಸ್ಥೆಯ ಯೋಜನೆಗಳನ್ನು ಪರಿಚಯಿಸುವುದರೊಂದಿಗೆ ವಿಶ್ವಾಸಪೂರ್ಣ ಸಂಬಂಧಗಳನ್ನು ಬೆಳೆಸುವುದು ಮತ್ತು ಹೊಸ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

    ಸಂಸ್ಥೆಯ ನಿರ್ದೇಶಕ ಡಿಯಾನ್ ಮೊಂತೆರೊ ಮಾತನಾಡಿ, ಬೆಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮನೆ ಖರೀದಿದಾರರ ನಿರೀಕ್ಷೆಗಳು ಮತ್ತು ಜೀವನಶೈಲಿಯ ಅಗತ್ಯಗಳು ನಿರಂತರವಾಗಿ ಬದಲಾಗುತ್ತಿವೆ. ಈ ಬದಲಾವಣೆಗಳನ್ನು ಅರಿತು ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಗುಣಮಟ್ಟದ ವಸತಿ ಯೋಜನೆಗಳನ್ನು ಪರಿಚಯಿಸುವುದು ಸಂಸ್ಥೆಯ ಗುರಿಯಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೆಂಗಳೂರು ಮಹಾಧರ್ಮಪ್ರಾಂತ್ಯದ ಸಹಾಯಕ ಬಿಷಪ್ ಡಾ. ಜೋಸೆಫ್ ಸುಸೈನಾಥನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಖ್ಯಾತ ನಿರೂಪಕಿ ರೀನಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

    ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

    ನೂತನ ಕಚೇರಿಯ ಉದ್ಘಾಟನೆಯ ಅಂಗವಾಗಿ ರೋಹನ್ ಕಾರ್ಪೋರೇಶನ್ ನವೆಂಬರ್ 6, 7 ಮತ್ತು 8ರಂದು ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್ ಆಯೋಜಿಸಿದೆ. ಪ್ರದರ್ಶನದಲ್ಲಿ
    ಸಂಸ್ಥೆಯ ವಿವಿಧ ವಸತಿ ಹಾಗೂ ರಿಯಲ್ ಎಸ್ಟೇಟ್ ಯೋಜನೆಗಳ ಮಾಹಿತಿ ಪಡೆಯಲು, ಸಂಸ್ಥೆಯ ಪ್ರತಿನಿಧಿಗಳೊಂದಿಗೆ ನೇರವಾಗಿ ಸಮಾಲೋಚಿಸಲು ಗ್ರಾಹಕರಿಗೆ ಅವಕಾಶ
    ಕಲ್ಪಿಸಲಾಗಿದೆ. ಅಲ್ಲದೆ, ಆಯ್ದ ಯೋಜನೆಗಳನ್ನು ವಿಶೇಷ ಹಾಗೂ ಆಕರ್ಷಕ ದರಗಳಲ್ಲಿ ಖರೀದಿಸುವ ಅವಕಾಶವೂ ಇರಲಿದೆ.

    1994ರಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮೂರು ದಶಕಗಳಿಗೂ ಮೀರಿದ ಅನುಭವ ಮತ್ತು ಗ್ರಾಹಕರ
    ವಿಶ್ವಾಸದೊಂದಿಗೆ ಇದೀಗ ಬೆಂಗಳೂರಿನ ಮಾರುಕಟ್ಟೆಯಲ್ಲೂ ತನ್ನ ಛಾಪು ಮೂಡಿಸಲು ಮುಂದಾಗಿದೆ.

    Post Views: 1

    Related Posts

    ಪುತ್ತೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ!!

    November 5, 2026

    ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಸುಲಿಗೆ ಪ್ರಕರಣ- ಮತ್ತೊಬ್ಬ ಆರೋಪಿ ಅರೆಸ್ಟ್!!

    November 5, 2026

    ಮಂಗಳೂರು: ನಿಷೇಧಿತ ಮಾದಕವಸ್ತು LSD ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

    November 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ

    November 5, 2026

    ಪುತ್ತೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ!!

    November 5, 2026

    ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಸುಲಿಗೆ ಪ್ರಕರಣ- ಮತ್ತೊಬ್ಬ ಆರೋಪಿ ಅರೆಸ್ಟ್!!

    November 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.