Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಸಚಿವ ರಾಮಲಿಂಗಾರೆಡ್ಡಿ
    ಇತ್ತೀಚಿನ ಸುದ್ದಿ

    RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಸಚಿವ ರಾಮಲಿಂಗಾರೆಡ್ಡಿ

    December 10, 2025
    Share

    ಬೆಳಗಾವಿ ಸುವರ್ಣಸೌಧ : ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

    ಮೇಲ್ಮನೆಯಲ್ಲಿ ಡಿ.10ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 342ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಆರ್ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ /ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ.

    ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದ್ದೇವೆ.

    ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಛೇರಿಯ ಅಧಿಕಾರಿ/ ಸಿಬ್ಬಂದಿಯವರನ್ನು ಭೇಟಿ ಮಾಡಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್ಟಿಓ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

    ಲೋಕಾಯುಕ್ತರವರ ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳ ವಿವರಗಳ ಮಾಹಿತಿಯನ್ನು ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದೆ. ದಿನಾಂಕ 01-11-2021 ರಿಂದ ಸಾರಿಗೆ ಇಲಾಖೆಯಲ್ಲಿನ 52 ಸೇವೆಗಳನ್ನು ಆನ್ ಲೈನ್ ಮುಖಾಂತರ ಒದಗಿಸುತ್ತ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

    Post Views: 187

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.