Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ‘RTO’ ಕಚೇರಿಯಲ್ಲಿ ಅಕ್ರಮ ನೋಂದಣಿ ಆರೋಪ : ಸರ್ಕಾರಕ್ಕೆ 300 ಕೋಟಿ ತೆರಿಗೆ ನಷ್ಟ
    ಇತ್ತೀಚಿನ ಸುದ್ದಿ

     ‘RTO’ ಕಚೇರಿಯಲ್ಲಿ ಅಕ್ರಮ ನೋಂದಣಿ ಆರೋಪ : ಸರ್ಕಾರಕ್ಕೆ 300 ಕೋಟಿ ತೆರಿಗೆ ನಷ್ಟ

    November 29, 2024
    Share

    ತುಮಕೂರು: ತುಮಕೂರಿನ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ಅಕ್ರಮವಾಗಿ ನೊಂದಣಿ ಪ್ರಕ್ರಿಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬುಧವಾರ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಗುರುವಾರವೂ ತನಿಖೆಯನ್ನು ಮುಂದುವರೆಸಿದ್ದು, ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ.ಈ ವೇಳೆ ಆರ್ ಟಿ ಓ ಕಚೇರಿಯಲ್ಲಿ ಅಕ್ರಮ ನೋಂದಣಿ ಪ್ರಕ್ರಿಯೆಯಿಂದ ಸರ್ಕಾರಕ್ಕೆ ಸುಮಾರು 300 ಕೋಟಿ ರೂಪಾಯಿ ತೆರಿಗೆ ನಷ್ಟವಾಗಿದೆ ಎಂಬುದು ಬೆಳಕಿಗೆ ಬಂದಿದೆ.

    ಹೌದು ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಣಿಯಾಗಿರುವ ಸುಮಾರು 6 ಸಾವಿರಕ್ಕೂ ಹೆಚ್ಚಿನ ಟ್ರ್ಯಾಕ್ಟರ್‌ಗಳಲ್ಲಿ 2,500 ಕೃಷಿ ದೃಢೀಕರಣ ಪತ್ರ (ಬೋನಾಫೈಡ್) ನೀಡಿ ಮಧ್ಯವರ್ತಿಯೊಬ್ಬ ಟ್ರ್ಯಾಕ್ಟರ್ ಗಳನ್ನು ನೋಂದಣಿ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.ಸಾರಿಗೆ ಅಧಿಕಾರಿಗಳು ಹಾಗೂ ಮಧ್ಯವರ್ತಿಯಿಂದ ನಡೆದಿರುವ ಈ ಅಕ್ರಮದಲ್ಲಿ ಸರ್ಕಾರಕ್ಕೆ 300 ಕೋಟಿಗೂ ಹೆಚ್ಚು ತೆರಿಗೆ ನಷ್ಟವಾಗಿದೆ ಎನ್ನಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ನಕಲಿ ಕೃಷಿ ದೃಢೀಕರಣ ಪತ್ರ ನೀಡಿ ನೋಂದಣಿ ಮಾಡಿಸಿರುವ ಕಡತಗಳ ಬೆನ್ನತ್ತಿದ್ದಾರೆ.

    2,500 ಟ್ರ್ಯಾಕ್ಟರ್, 500ಕ್ಕೂ ಹೆಚ್ಚು ಜೆಸಿಬಿಗಳನ್ನು ನಕಲಿ ಕೃಷಿ ದೃಢೀಕರಣ ಪತ್ರವನ್ನು ನೀಡಿ ನೋಂದಣಿ ಮಾಡಲಾಗಿದ್ದು, ಅಕ್ರಮ ವ್ಯವಹಾರದಲ್ಲಿ ಸರ್ಕಾರಕ್ಕೆ 300 ಕೋಟಿಗೂ ಹೆಚ್ಚು ತೆರಿಗೆ ನಷ್ಟವಾಗಿದ್ದು, ನಕಲಿ ದಾಖಲೆಗಳನ್ನು ನೀಡಿ ನೋಂದಣಿ ಮಾಡಿರುವ ಟ್ರ್ಯಾಕ್ಟರ್ ಮತ್ತು ಜೆಸಿಬಿ ಕಡತಗಳು ಕಚೇರಿ ನಾಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ.

    ಮೇಲ್ನೋಟಕ್ಕೆ ಇಷ್ಟು ಅಕ್ರಮಗಳು ಕಂಡು ಬಂದರೆ ಬಗೆದಷ್ಟು ಇನ್ನಷ್ಟು ಅಕ್ರಮಗಳು ಪತ್ತೆಯಾಗುವ ಸಾಧ್ಯತೆ ಇದ್ದು, ನಕಲಿ ಕೃಷಿ ದೃಢೀಕರಣ ಪತ್ರ ನೀಡಿ ನೋಂದಣಿ ಮಾಡಿರುವ ಹಗರಣದಲ್ಲಿ ಹಿಂದಿನ ಅಧಿಕಾರಿಗಳು ನಿವೃತ್ತರಾಗಿರುವ ಸಿಬ್ಬಂದಿಗಳು ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಸಮಗ್ರವಾಗಿ ತನಿಖೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

    Post Views: 198

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.