Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರುಕ್ಮಿಣಿ ವಸಂತ್ ಡೀಪ್‌ಫೇಕ್ ಪ್ರಕರಣ ಭೇದಿಸಿದ ಸೈಬರ್ ಪೊಲೀಸರು; ಆರೋಪಿಗಳ ಹಿನ್ನೆಲೆ ಬಹಿರಂಗ
    ಇತ್ತೀಚಿನ ಸುದ್ದಿ

    ರುಕ್ಮಿಣಿ ವಸಂತ್ ಡೀಪ್‌ಫೇಕ್ ಪ್ರಕರಣ ಭೇದಿಸಿದ ಸೈಬರ್ ಪೊಲೀಸರು; ಆರೋಪಿಗಳ ಹಿನ್ನೆಲೆ ಬಹಿರಂಗ

    June 21, 2026
    Share

    ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ಫೋಟೋಗಳು ಮತ್ತು ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ಆರೋಪಿಗಳ ಹಿನ್ನೆಲೆ ಬಹಿರಂಗವಾಗಿದ್ದು, ಬಂಧಿತರೆಲ್ಲರೂ ಸುಶಿಕ್ಷಿತರು ಮತ್ತು ಉತ್ತಮ ಉದ್ಯೋಗದಲ್ಲಿದ್ದವರು ಎಂಬುದು ಬೆಳಕಿಗೆ ಬಂದಿದೆ.
    ಬಂಧಿತರನ್ನು ಬಾಗಲಕೋಟೆ ಜಿಲ್ಲೆಯ ರವಿಕುಮಾರ್ (24), ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ರಂಜಿತ್ ಕುಮಾರ್ (25) ಹಾಗೂ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿರುವ ಚಂದ್ರಕಾಂತ್ (33) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೊದಲ ಆರೋಪಿ ರವಿಕುಮಾರ್ ಬಿಎಸ್‌ಸಿ ನರ್ಸಿಂಗ್ ಪದವಿ ಪಡೆದಿದ್ದು, ತನ್ನದೇ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಯೂಟ್ಯೂಬ್ ಮೂಲಕ ಆದಾಯ ಗಳಿಸಲು ಆರಂಭಿಸಿದ್ದ ಆತ ಹೆಚ್ಚು ವೀಕ್ಷಣೆ ಪಡೆಯುವ ಉದ್ದೇಶದಿಂದ ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಅಪ್‌ಲೋಡ್ ಮಾಡಲು ಆರಂಭಿಸಿದ್ದಾನೆ ಎನ್ನಲಾಗಿದೆ.

    ಎರಡನೇ ಆರೋಪಿ ರಂಜಿತ್ ಕುಮಾರ್ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ವರ್ಷಕ್ಕೆ ಸುಮಾರು 20 ಲಕ್ಷ ರೂ. ಸಂಬಳ ಪಡೆಯುತ್ತಿದ್ದ. ತಾಂತ್ರಿಕ ಜ್ಞಾನವನ್ನು ದುರುಪಯೋಗಪಡಿಸಿಕೊಂಡ ಆತ ‘ಮನರಂಜನೆ’ಗಾಗಿ ಹಲವು ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸುತ್ತಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೂರನೇ ಆರೋಪಿ ಚಂದ್ರಕಾಂತ್ ಬೆಂಗಳೂರಿನ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆನ್ಸಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು, ಉತ್ತಮ ಸಂಬಳ ಪಡೆಯುತ್ತಿದ್ದ. ಕೇವಲ ವಿಕೃತ ಮನರಂಜನೆಗಾಗಿ ನಟಿಯರ ಚಿತ್ರಗಳನ್ನು ಮಾರ್ಫ್ ಮಾಡಿ ಡೀಪ್‌ಫೇಕ್ ಕಂಟೆಂಟ್ ಸೃಷ್ಟಿಸುತ್ತಿದ್ದಾಗಿ ಆತ ಕೂಡ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

    ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ ಮೂರು ಹೈ-ಎಂಡ್ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಐ ಆಧಾರಿತ ಅಪ್ಲಿಕೇಶನ್‌ಗಳು ಮತ್ತು ಸಾಫ್ಟ್‌ವೇರ್‌ಗಳ ನೆರವಿನಿಂದ ನಟಿಯರ ಮುಖಗಳನ್ನು ಅಶ್ಲೀಲ ವಿಡಿಯೋಗಳಿಗೆ ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಕುರಿತು ಸೈಬರ್ ಕಮಾಂಡ್ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸುಶಿಕ್ಷಿತರು ಮತ್ತು ತಾಂತ್ರಿಕ ಜ್ಞಾನ ಹೊಂದಿರುವವರೇ ಸೈಬರ್ ಅಪರಾಧಗಳಲ್ಲಿ ತೊಡಗುತ್ತಿರುವ ಆತಂಕಕಾರಿ ಬೆಳವಣಿಗೆಯನ್ನು ಮತ್ತೊಮ್ಮೆ ಬಯಲಿಗೆಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    Post Views: 104

    karnataka PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.