Facebook Twitter Instagram
    Friday, November 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖಾಸಗಿ ಬಸ್ ಡಿಕ್ಕಿ – 2ನೇ ತರಗತಿ ವಿದ್ಯಾರ್ಥಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಬಸ್ ಡಿಕ್ಕಿ – 2ನೇ ತರಗತಿ ವಿದ್ಯಾರ್ಥಿ ಸಾವು

    November 27, 2026
    Share

    ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ಬಾಲಕನ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಲಕ್ಷ್ಮೀ ಕಲಹಾಲ ಎಂಬುವವರ 7 ವರ್ಷದ ಪುತ್ರ ಮೃತಪಟ್ಟ ದುರ್ದೈವಿ ಬಾಲಕ. ಈತ ಕಂಕನಾಡಿಯ ಸೈಂಟ್ ಜೋಸೆಫ್ಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

    ನವೆಂಬರ್ 25ರಂದು ಸಂಜೆ 4.15ರ ಸುಮಾರಿಗೆ ಶಾಲೆ ಬಿಟ್ಟ ಬಳಿಕ ಬಾಲಕ ಮನೆಗೆ ತೆರಳಲು ಶಾಲೆಯ ಮುಂಭಾಗದ ಕಂಕನಾಡಿ–ಫಳ್ನೀರ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಫಳ್ನೀರ್ ಕಡೆಗೆ ಹೋಗಲು ನಿಂತಿದ್ದ ಖಾಸಗಿ ಬಸ್‌ನ ಚಾಲಕ, ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಒಮ್ಮೆಲೇ ಬಲಕ್ಕೆ ತಿರುಗಿಸಿ ಚಲಾಯಿಸಿದ್ದಾನೆ.

    ಪರಿಣಾಮ ಬಸ್ಸಿನ ಬಲಭಾಗ ಬಾಲಕನಿಗೆ ಬಡಿದಿದ್ದು, ರಸ್ತೆಗೆ ಎಸೆಯಲ್ಪಟ್ಟ ಬಾಲಕನ ಮೇಲೆ ಬಸ್ಸಿನ ಬಲ ಹಿಂಬದಿಯ ಚಕ್ರ ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಬಸ್ ಚಾಲಕ ಹಾಗೂ ಸ್ಥಳೀಯರು ತಕ್ಷಣವೇ ಸಮೀಪದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ 5.50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾನೆ. ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಪುತ್ರನ ಸಾವಿಗೆ ಕಾರಣನಾದ ಬಸ್ ಚಾಲಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಾಲಕನ ತಾಯಿ ಲಕ್ಷ್ಮೀ ಕಲಹಾಲ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

    Post Views: 7

    Related Posts

    ಮಂಗಳೂರು: ಜಿಂಕೆ ಕೊಂಬು ಮಾರಾಟ ಜಾಲ ಪತ್ತೆ- 3 ಕೊಂಬುಗಳ ಸಹಿತ ಆರೋಪಿ ಅರೆಸ್ಟ್

    November 27, 2026

    ಮಂಗಳೂರು: ಗಸ್ತು ತಿರುಗುವ ನೆಪದಲ್ಲಿ ವ್ಯಕ್ತಿಯನ್ನು ಸುಲಿಗೆ ಮಾಡಿ ಜೀವ ಬೆದರಿಕೆ – ಇಬ್ಬರು ಪೊಲೀಸ್ ಸಿಬ್ಬಂದಿಗೆ ಷರತ್ತುಬದ್ಧ ಜಾಮೀನು

    November 27, 2026

    ಮ್ಯಾರೇಜ್ ಪಾರ್ಟಿ’ ಸಿನಿಮಾ ಡಿಸೆಂಬರ್ 4ರಂದು ರಾಜ್ಯಾದ್ಯಂತ ಬಿಡುಗಡೆ

    November 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಜಿಂಕೆ ಕೊಂಬು ಮಾರಾಟ ಜಾಲ ಪತ್ತೆ- 3 ಕೊಂಬುಗಳ ಸಹಿತ ಆರೋಪಿ ಅರೆಸ್ಟ್

    November 27, 2026

    ಮಂಗಳೂರು: ಖಾಸಗಿ ಬಸ್ ಡಿಕ್ಕಿ – 2ನೇ ತರಗತಿ ವಿದ್ಯಾರ್ಥಿ ಸಾವು

    November 27, 2026

    ಮಂಗಳೂರು: ಗಸ್ತು ತಿರುಗುವ ನೆಪದಲ್ಲಿ ವ್ಯಕ್ತಿಯನ್ನು ಸುಲಿಗೆ ಮಾಡಿ ಜೀವ ಬೆದರಿಕೆ – ಇಬ್ಬರು ಪೊಲೀಸ್ ಸಿಬ್ಬಂದಿಗೆ ಷರತ್ತುಬದ್ಧ ಜಾಮೀನು

    November 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.