ಉಡುಪಿ: ಗಾಂಜಾ ಪ್ರಕರಣದ ಆರೋಪಿ ಮಹಾರಾಷ್ಟ್ರದ ಅವಿನಾಶ್ ದಿಗಂಬರ್ ಲೋಖಂಡೆ(28) ಎಂಬಾತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಶಾಂತವೀರ ಶಿವಪ್ಪ ಆದೇಶಿಸಿದ್ದಾರೆ.
ಸೆನ್ ಅಪರಾಧ ಪೊಲೀಸ್ ಠಾಣೆ ಅಂದಿನ ನಿರೀಕ್ಷಕ ಸೀತಾರಾಮ ಅವರು 2019ರ ಜು.24ರಂದು ಇಂದ್ರಾಳಿ ರೈಲ್ವೆ ನಿಲ್ದಾಣ ಬಳಿ ಅವಿನಾಶ್ನನ್ನು ಬಂಧಿಸಿ ಆತನಿಂದ 2.20 ಕೆ.ಜಿ. ಗಾಂಜಾ, ಮೊಬೈಲ್ ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ನಡೆಸಿದ ಸೆನ್ ಅಪರಾಧ ಪೊಲೀಸ್ ಠಾಣಿ ಉಪನಿರೀಕ್ಷಕ ನಾರಾಯಣ ಅವರು 2020ರ ಮಾ.23ರಂದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕಿ ಶಾಂತಿಬಾಯಿ ವಾದ ಮಂಡಿಸಿದ್ದರು