Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ವೃದ್ಧನ ಕೊಲೆ- ಮಗ ಸಹಿತ ಮೂವರ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ವೃದ್ಧನ ಕೊಲೆ- ಮಗ ಸಹಿತ ಮೂವರ ಬಂಧನ

    February 16, 2026
    Share

    ಉಪ್ಪಿನಂಗಡಿ: ಏಳು ದಿನದ ಹಿಂದೆ ಸಂಭವಿಸಿದ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ವೃದ್ಧ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣ ಕೊಲೆ ಪ್ರಕರಣ‌ ಎಂದು ಖಚಿತ ಪಡಿಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತರ ಮಗ ಹಾಗೂ ಸಂಬಂಧಿಕರಾದ ಕೆ.ವಿ. ತೋಮಸ್ (39), ಸಿ.ಟಿ ರಾಜು (59), ಚಾಕೊಚ್ಚ (51) ಬಂಧಿತರು.

    ಫೆ.9ರಂದು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಸಿ.ವರ್ಗೀಸ್ ಸಾವಿಗೆ ಸಂಬಂಧಪಟ್ಟಂತೆ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಕೆ.ಸಿ ವರ್ಗೀಸ್ ಅವರು ತಲೆಗೆ ಬಿದ್ದ ಗಂಭೀರ ಏಟು ಮತ್ತು ದೇಹದ ಇತರ ಭಾಗಗಳಿಗೆ ಆಗಿರುವ ಗಾಯದಿಂದಾಗಿ ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿ ಬಂದಿದೆ.

    ಮೃತ ಕೆ.ಸಿ ವರ್ಗಿಸ್ ತನ್ನ ಹೆಂಡತಿಗೆ ಹೊಡೆದಿದ್ದಾರೆ. ಇದನ್ನು ನೋಡಿದ ಒಬ್ಬ ವ್ಯಕ್ತಿ ಈ ಬಗ್ಗೆ ಆಕೆಯ ಮಗ ಕೆ.ವಿ ತೋಮಸ್‌ಗೆ ತಿಳಿಸಿದ್ದಾನೆ. ಮಗನು ತನಗೆ ಪರಿಚಯದ ಒಬ್ಬ ಆಟೋರಿಕ್ಷಾದವರನ್ನು ಬರಮಾಡಿ ಆಸ್ಪತ್ರೆಗೆ ಕಳುಹಿಸಿದ್ದಾನೆ. ಆಗ ಆಕೆಯ ತಮ್ಮ ರಾಜು ಆಸ್ಪತ್ರೆಗೆ ಬಂದು ನೋಡಿ ತನ್ನ ತಮ್ಮ ಚಾಕೋಚ್ಚನಿಗೆ ಕಾಲ್ ಮಾಡಿ ಅಕ್ಕನಿಗೆ ಅವರ ಗಂಡ ಹೊಡೆದಿರುವುದಾಗಿ ತಿಳಿಸಿ ಬೇಗ ಬಾ ಎಂದು ಕರೆದಿದ್ದಾನೆ. ಹಾಗೆ ಬಂದು ಥಾಮಸ್‌ಗೆ ಕರೆ ಮಾಡಿ ವರ್ಗೀಸ್‌ರನ್ನು ಹೆದರಿಸಬೇಕೆಂದು ಚರ್ಚೆ ಮಾಡಿ ಥಾಮಸ್‌ನನ್ನು ಸ್ವಲ್ಪ ದೂರ ಹೊರಗೆ ಬಿಟ್ಟು ಚಾಕೊಚ್ಚ ಮತ್ತು ರಾಜುರವರು ಒಳಗೆ ಹೋಗಿ ಮೃತ ಕೆ.ಸಿ ವರ್ಗಿಸ್‌ರವರಿಗೆ ಕಟ್ಟಿಗೆಯಿಂದ ಹೊಡೆದಿದ್ದಾರೆ.

    ಬಳಿಕ ಹೊರಗೆ ಬಂದು ಥಾಮಸ್‌ ಬಳಿ ಅವರಿಗೆ ಸರಿಯಾಗಿ ಹೊಡೆದಿದ್ದೇವೆ ಅವರನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿ ಹೋಗಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗಿ ಥಾಮಸ್ ತಂದೆ ಮಂಚದಿಂದ ಕೆಳಗೆ ಬಿದ್ದು ಅಲ್ಲಿದ್ದ ಕಲ್ಲಿಗೆ ತಲೆ ತಾಗಿ ಪೆಟ್ಟಾಗಿ ಮೃತರಾಗಿರಬಹುದಾಗಿ ಇದೊಂದು ಆಸ್ವಾಭಾವಿಕ ಪ್ರಕರಣವೆಂದು ತಿಳಿಸಿದ್ದಾನೆ. ಆದರೆ ಸಂದೇಹದ ಹಿನ್ನೆಲೆ ಉಪ್ಪಿನಂಗಡಿ ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸಿದಾಗ ಅಸಲಿಯತ್ತು ಬಯಲಾಗಿದ್ದು ಮೂವರನ್ನು ಬಂಧಿಸಲಾಗಿದೆ

    Post Views: 226

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.