Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ- ಇಬ್ಬರು ಪೊಲೀಸ್‌ ವಶ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ- ಇಬ್ಬರು ಪೊಲೀಸ್‌ ವಶ..!

    August 13, 2024
    Share

    ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ (34) ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಭಾನುವಾರ ರಾತ್ರಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದೆ. ಇದರ ಹಿಂದೆ ಗೋಲ್ಡ್‌ ಮಾಫಿಯಾ ಶಂಕ ವ್ಯಕ್ತವಾಗಿದ್ದು , ಆ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ. ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ ಸಮೀರ್ ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು ಈತನ ಚಲನವಲನಗಳ ಮೇಲೆ 4-5 ಮಂದಿ ದುಷ್ಕರ್ಮಿಗಳ ತಂಡ ಕಣ್ಣಿಟ್ಟಿತ್ತು. ಬಾನುವಾರ ರಾತ್ರಿ 10.15ರ ವೇಳೆಗೆ ಸಮೀರ್ ತನ್ನ ತಾಯಿ. ಪತ್ನಿ. ಮಕ್ಕಳ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟವುಡ್ ಸೆಂಟರ್‌ವೊಂದಕ್ಕೆ ಬಂದಿದ್ದಾರೆ. ಈ ವೇಳೆ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಅಪಾಯವನ್ನರಿತ ಸಮೀರ್ ತಪ್ಪಿಸಿಕೊಂಡು ರೈಲ್ವೆ ಹಳಿ ಕಡೆಗೆ ಒಡಿದ್ದಾನೆ. ಆದರೆ ದುಷ್ಕರ್ಮಿಗಳು ಬೆನ್ನಟ್ಟಿ ಸಮೀರ್‌ನನ್ನು ಕೊಲೆಗೈದಿದ್ದಾರೆ. ಪೊಲೀಸರು ಕೆಲಹೊತ್ತು ಹುಡುಕಾಡಿದ ಬಳಿಕ ಸಮೀರ್ ಮೃತದೇಹ ಸಿಕ್ಕಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ ನಾಯಕ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ತಿಂಗಳ ಹಿಂದೆ ಉಪ್ಪಳದ ನಟೋರಿಯಸ್ ವ್ಯಕ್ತಿಯೊಬ್ಬ ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವೇಳೆ ಮಾಹಿತಿ ಪಡೆದು ಮಧ್ಯವರ್ತಿಯನ್ನು ಅಪಹರಿಸಿ ಕೋಟಿ ರೂ. ಮೌಲ್ಯದ ಚಿನ್ನವನ್ನು ಎಗರಿಸಿದ್ದ. ಇದೇ ವಿಚಾರದಲ್ಲಿ ಜೈಲಿನಲ್ಲಿ ಸಮೀರ್ ಮೇಲೆ ದಾಳಿಯೂ ನಡೆದಿತ್ತು. ಚಿನ್ನ ಎಗರಿಸಿದ ದ್ವೇಷದಲ್ಲೇ ಉಪ್ಪಳದ ಗ್ಯಾಂಗ್ ಸುಪಾರಿ ಕಿಲ್ಲರ್ ಗಳಿಂದ ಸಮೀರ್‌ನನ್ನು ಕೊಲೆಗೈದಿರುವ ಸಾಧ್ಯತೆಯಿದೆ ಎಂಬ ಅನುಮಾನಗಳು ದಟ್ಟವಾಗಿದೆ. ಮಷ್ಕರ್ಮಿಗಳು ಪರಾರಿಯಾದ ಕಾರು ಉಡುಪಿಯ ನೋಂದಣಿಯಲ್ಲಿತ್ತು ಎನ್ನುವುದನ್ನು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಸಮೀರ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಶಯಾಸ್ಪದ ವ್ಯಕ್ತಿಗಳಾಗಿ ಗುರುತಿಸಿಕೊಂಡ ಟಾರ್ಗೆಟ್ ಇಲ್ಯಾಸ್ ಸಂಬಂಧಿಕ ಹಾಗೂ ಆತನ ಮಿತ್ರನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

    Post Views: 335

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.