ಮಂಗಳೂರು : ಸ್ಕೂಟರ್ ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಇವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ತೊಕ್ಕೊಟ್ಟು ಜಂಕ್ಷನ್ ಬದಲು ಕೋಟೆಕಾರು ಬೀರಿವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಉರುಳಿ ಬಿದ್ದಿದ್ದಾರೆ. ತಕ್ಷಣ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.