Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟ್ ಲೈಟ್ ಫೋನ್ ಸದ್ದು-ಪೊಲೀಸರಿಂದ ಅರಣ್ಯ ಪ್ರದೇಶದಲ್ಲಿ ಶೋಧ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟ್ ಲೈಟ್ ಫೋನ್ ಸದ್ದು-ಪೊಲೀಸರಿಂದ ಅರಣ್ಯ ಪ್ರದೇಶದಲ್ಲಿ ಶೋಧ

    November 27, 2022
    Share

    ಬೆಳ್ತಂಗಡಿ: ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್ ನಿಂದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟ್ ಲೈಟ್ ಫೋನ್ ಕರೆ ಹೋಗಿರುವುದು ಬೆಳಕಿಗೆ ಬಂದಿದೆ.‌ ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರಿಂದ ಶನಿವಾರ  ಬೆಂದ್ರಾಳ ಪ್ರದೇಶದಲ್ಲಿ ತನಿಖೆ ಮತ್ತಷ್ಟು ಚುರುಕುಗೊಳಿಸಲಾಗಿದೆ.

    ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ನವೆಂಬರ್ 18 ರಂದು ಸಂಜೆ 5 ಗಂಟೆಗೆ ನಿಷೇಧಿತ ಸ್ಯಾಟ್ ಲೈಟ್ ಫೋನ್ ಕರೆ ಹೋಗಿರುವ ಬಗ್ಗೆ ಕೇಂದ್ರ ಅಧಿಕಾರಿಗಳಿಗೆ ಮಾಹಿತಿ ಲಭಿಸಿದ್ದು ಅದರಂತೆ ಆಂತರಿಕ ಭದ್ರತಾ ಇಲಾಖೆ ಹಾಗೂ ಸ್ಥಳೀಯ ಪೊಲೀಸರಿಗೆ ತನಿಖೆ ಮಾಡಲು ಮಾಹಿತಿ ರವಾನಿಸಿದ್ದಾರೆ.

    ಧರ್ಮಸ್ಥಳ ಪೊಲೀಸರು ಹಾಗೂ ಮಂಗಳೂರು ಆಂತರಿಕ ಭದ್ರತಾ ಇಲಾಖೆಯ ಇನ್ಸ್ಪೆಕ್ಟರ್ ಚಿದಾನಂದ್ ಮತ್ತು ತಂಡ ಶುಕ್ರವಾರ ಬೆಂದ್ರಾಳ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

    ಶನಿವಾರ ಮತ್ತೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ ಐ ಅನಿಲ್ ಕುಮಾರ್ ಡಿ. ಮತ್ತು ತಂಡ ತೋಟತ್ತಾಡಿ ಗ್ರಾಮದ ಬಾರೆಮನೆ ನಿವಾಸಿಗಳಾದ ರುಕ್ಮಯ ಗೌಡ ಮನೆ ಮತ್ತು ಚೆಲುವಮ್ಮ ಮನೆಯಲ್ಲಿ ಮಾಹಿತಿ ಸಂಗ್ರಹಿಸಿ ಬೆಂದ್ರಾಳ ಸುತ್ತಮುತ್ತಲಿನ ಸುಮಾರು ಐದು ಕಿ.ಮೀ. ಅರಣ್ಯ ಪ್ರದೇಶದೊಳಗೆ ಹುಡುಕಾಟ ನಡೆಸಿ ನಂತರ ಸಾಟಲೈಟ್ ಕರೆ ಹೋದ ಸ್ಥಳವನ್ನು ಅತಣ್ಯದಲ್ಲಿ ಪತ್ತೆ ಹಚ್ವಿದ್ದು ಈ ಪ್ರದೇಶದಲ್ಲಿ  ಪರಿಶೀಲನೆ ನಡೆಸಿದರು.

    ಆದರೆ ಇಲ್ಲಿ ಯಾವುದೇ ಇತರ ಕುರುಹುಗಳು ಪತ್ತೆಯಾಗಿಲ್ಲ. ಪೊಲೀಸರು  ಒಟ್ಟಾರೆಯಾಗಿ ಈ ಪ್ರದೇಶದಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಮಾಡುತ್ತಿದ್ದಾರೆ.ಸ್ಯಾಟ್ ಲೈಟ್ ಕರೆ ಹೋದ ಪ್ರದೇಶಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ ಐ ಅನಿಲ್ ಕುಮಾರ್ ಡಿ ನೇತೃತ್ವದಲ್ಲಿ ಸಿಬ್ಬಂದಿ ಮಹಮ್ಮದ್ ಅಸ್ಲಾಮ್, ಪ್ರಶಾಂತ್ , ರಾಜೇಶ್ ಹಾಗೂ ಸ್ಥಳೀಯರಾದ ಮೋಹನ್ ಗೌಡ, ಉಮೇಶ್.ಬಿ , ಸತೀಶ್ ಬಳ್ಳಿ , ಕಾರ್ತಿಕ್ ಪೊಲೀಸರಿಗೆ ಕಾಡಿನಲ್ಲಿ ದಾರಿ ತೋರಿಸಲು ಸಹಕರಿಸಿದರು.

    Post Views: 183

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.