Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ – ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ – ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

    February 21, 2024
    Share

    ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.ಈ ಸಂಬಂಧ ಮೃತ ಸೌಜನ್ಯ ತಂದೆಯೂ ಆದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

    ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್‌.ಬಾಲಕೃಷ್ಣ, ‘ಪ್ರಕರಣದಿಂದ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

    ಇದನ್ನು ಪರಿಗಣಿಸಿದ ನ್ಯಾಯಪೀಠ, ರೋಸ್ಟರ್‌ ಅನುಸಾರ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು.

    ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿತು. ಪ್ರಕರಣದಲ್ಲಿ ಆರೋಪದಿಂದ ಖುಲಾಸೆಯಾಗಿರುವ ಸಂತೋಷ್‌ ರಾವ್‌ ಅವರನ್ನು ಅರ್ಜಿಯಲ್ಲಿ ಹತ್ತನೇ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲಾಗಿದೆ.

    ‘ಆರೋಪಿ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ಸೆಷನ್ಸ್‌ ನ್ಯಾಯಾಲಯ 2023ರ ಜೂನ್‌ 16ರಂದು ಆದೇಶಿಸಿದೆ. ಈ ಪ್ರಕರಣದಲ್ಲಿ ನ್ಯಾಯೋಚಿತವಾದ ತನಿಖೆ ನಡೆದಿಲ್ಲ. ಹೀಗಾಗಿ, ಮರು ತನಿಖೆ ನಡೆಸಲು ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

    Post Views: 246

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.