Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಹೊಸ ಇತಿಹಾಸ : 2025-26ನೇ ಆರ್ಥಿಕ ವರ್ಷದಲ್ಲಿ ₹20,226 ಕೋಟಿ ವ್ಯವಹಾರ, ₹131 ಕೋಟಿ ಲಾಭ
    ಇತ್ತೀಚಿನ ಸುದ್ದಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಹೊಸ ಇತಿಹಾಸ : 2025-26ನೇ ಆರ್ಥಿಕ ವರ್ಷದಲ್ಲಿ ₹20,226 ಕೋಟಿ ವ್ಯವಹಾರ, ₹131 ಕೋಟಿ ಲಾಭ

    April 7, 2026
    Share

    ಮಂಗಳೂರು : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) 2025-26ನೇ ಸಾಲಿನಲ್ಲಿ ದಾಖಲೆಯ ಸಾಧನೆ ಮಾಡಿದೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿರುವ ಈ ಬ್ಯಾಂಕ್, ರೂ. 20,226.19 ಕೋಟಿ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ.

    ದಾಖಲೆ ಲಾಭ
    ಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ರೂ. 131.14 ಕೋಟಿ ಲಾಭ ಗಳಿಸಿದ್ದು, ಇದು ಕಳೆದ ವರ್ಷದ ರೂ.110.41 ಕೋಟಿಗೆ ಹೋಲಿಸಿದರೆ ಶೇ.18.78ರಷ್ಟು ಹೆಚ್ಚಾಗಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಇದು ಸಾರ್ವಕಾಲಿಕ ದಾಖಲೆ ಲಾಭವಾಗಿದೆ. ಅನುತ್ಪಾದಕ ಆಸ್ತಿ (NPA) ಪ್ರಮಾಣವು ಶೇ.2.42ರಿಂದ ಶೇ.2.21ಕ್ಕೆ ಇಳಿಕೆಯಾಗಿರುವುದು ಬ್ಯಾಂಕಿನ ಆರ್ಥಿಕ ಶಕ್ತಿಯನ್ನು ಸೂಚಿಸುತ್ತದೆ

    ಠೇವಣಿ ಮತ್ತು ಸಾಲ ವಿತರಣೆ
    ಬ್ಯಾಂಕ್ ತನ್ನ 113 ಶಾಖೆಗಳ ಮೂಲಕ ರೂ. 9,264.64 ಕೋಟಿ ಠೇವಣಿ ಸಂಗ್ರಹಿಸಿದ್ದು, ಇದು ಕಳೆದ ಸಾಲಿಗಿಂತ ಶೇ.17.53ರಷ್ಟು ಹೆಚ್ಚಾಗಿದೆ.
    ಮುಂಗಡ ಸಾಲವಾಗಿ ರೂ. 9,706.75 ಕೋಟಿ ವಿತರಿಸಿದ್ದು, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.


    ಮಂಗಳೂರು : 
    ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) 2025-26ನೇ ಸಾಲಿನಲ್ಲಿ ದಾಖಲೆಯ ಸಾಧನೆ ಮಾಡಿದೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿರುವ ಈ ಬ್ಯಾಂಕ್, ರೂ. 20,226.19 ಕೋಟಿ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ.

    ಕಳೆದ ಸಾಲಿನ ರೂ.17,366.68 ಕೋಟಿ ವ್ಯವಹಾರಕ್ಕೆ ಹೋಲಿಸಿದರೆ ಈ ಬಾರಿ ಶೇ.16.47ರಷ್ಟು ಏರಿಕೆ ಕಂಡು ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಮುಂದಿನ 2026-27ನೇ ಸಾಲಿಗೆ ರೂ.22,500 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ.

    ದಾಖಲೆ ಲಾಭ
    ಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ರೂ. 131.14 ಕೋಟಿ ಲಾಭ ಗಳಿಸಿದ್ದು, ಇದು ಕಳೆದ ವರ್ಷದ ರೂ.110.41 ಕೋಟಿಗೆ ಹೋಲಿಸಿದರೆ ಶೇ.18.78ರಷ್ಟು ಹೆಚ್ಚಾಗಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಇದು ಸಾರ್ವಕಾಲಿಕ ದಾಖಲೆ ಲಾಭವಾಗಿದೆ. ಅನುತ್ಪಾದಕ ಆಸ್ತಿ (NPA) ಪ್ರಮಾಣವು ಶೇ.2.42ರಿಂದ ಶೇ.2.21ಕ್ಕೆ ಇಳಿಕೆಯಾಗಿರುವುದು ಬ್ಯಾಂಕಿನ ಆರ್ಥಿಕ ಶಕ್ತಿಯನ್ನು ಸೂಚಿಸುತ್ತದೆ.

    ಠೇವಣಿ ಮತ್ತು ಸಾಲ ವಿತರಣೆ
    ಬ್ಯಾಂಕ್ ತನ್ನ 113 ಶಾಖೆಗಳ ಮೂಲಕ ರೂ. 9,264.64 ಕೋಟಿ ಠೇವಣಿ ಸಂಗ್ರಹಿಸಿದ್ದು, ಇದು ಕಳೆದ ಸಾಲಿಗಿಂತ ಶೇ.17.53ರಷ್ಟು ಹೆಚ್ಚಾಗಿದೆ.
    ಮುಂಗಡ ಸಾಲವಾಗಿ ರೂ. 9,706.75 ಕೋಟಿ ವಿತರಿಸಿದ್ದು, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

    ಕೃಷಿ ಕ್ಷೇತ್ರದಲ್ಲಿ ಸಾಧನೆ
    ಬ್ಯಾಂಕ್ ನೀಡಿದ ಕೃಷಿ ಸಾಲಗಳಲ್ಲಿ ಶೇಕಡಾ 100 ಮರುಪಾವತಿ ಸಾಧನೆ ಮಾಡಿದ್ದು, ಇದು ಸತತ 31 ವರ್ಷಗಳ ದಾಖಲೆ ಆಗಿದೆ. 1,68,583 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದ್ದು, 1,44,701 ರುಪೇ ಕಿಸಾನ್ ಕಾರ್ಡ್‌ಗಳನ್ನು ನೀಡಲಾಗಿದೆ.

    ಡಿಜಿಟಲ್ ಬ್ಯಾಂಕಿಂಗ್ ಪ್ರಗತಿ
    ಯುಪಿಐ (UPI) ಮತ್ತು ಐಎಂಪಿಎಸ್ (IMPS) ಸೇವೆಗಳೊಂದಿಗೆ ಬ್ಯಾಂಕ್ ಡಿಜಿಟಲ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಗೂಗಲ್ ಪೇ, ಫೋನ್ ಪೇ ಮುಂತಾದ ಪಾವತಿ ವ್ಯವಸ್ಥೆಗಳ ಮೂಲಕ ಗ್ರಾಹಕರು ಸುಲಭವಾಗಿ ಹಣ ವರ್ಗಾವಣೆ, ಬಿಲ್ ಪಾವತಿ ಮಾಡುತ್ತಿ

    ಸಾಮಾಜಿಕ ಮತ್ತು ಸಂಸ್ಥಾಪನಾ ಸಾಧನೆ
    34,765 ಸ್ವಸಹಾಯ ಗುಂಪುಗಳೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ ಸಿಬ್ಬಂದಿಗಳಿಗೆ ಪಿಂಚಣಿ ಯೋಜನೆ ಜಾರಿ
    ‘ಬ್ಯಾಂಕ್ ಆನ್ ವೀಲ್’ ಸೇವೆ ಪರಿಚಯಿಸಿದ ದೇಶದ ಮೊದಲ ಜಿಲ್ಲಾ ಸಹಕಾರಿ ಬ್ಯಾಂಕ್.

    Post Views: 91

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.