Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ- ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ
    ಇತ್ತೀಚಿನ ಸುದ್ದಿ

    ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ- ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ

    December 1, 2023
    Share

    ಹಾಸನ: ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಕಿಡ್ನಾಪ್ ಗೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ.

    ಪ್ರಕರಣದ ಹಿನ್ನಲೆ:

    ನ.30 ರಂದು ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಸಿನಿಮೀಯ ರೀತಿಯಲ್ಲಿ ತಂಡವೊಂದು ಇನ್ನೋವಾ ಕಾರಿನಲಿ ಅಪಹರಿಸಿತ್ತು. ಆದರೆ ಇದಕ್ಕೂ ಮುಂಚೆ ಅಂದರೆ 15 ದಿನಗಳ ಹಿಂದೆ ಶಿಕ್ಷಕಿಯನ್ನು ಮದುವೆ ಮಾಡಿಕೊಳ್ಳುವ ಪ್ರಸ್ತಾಪದೊಂದಿಗೆ ಮನೆಗೆ, ಅವರ ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ಆದರೆ, ಈ ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ.ಮದುವೆ ಒಪ್ಪದ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ಸಂಬಂಧಿ ರಾಮು ಎಂಬಾತ ಅಪಹರಿಸಿರುವ ಆರೋಪ ಕೇಳಿಬಂದಿತ್ತು. ಶಿಕ್ಷಕಿತಾಯಿಯೂ ಈ ಬಗ್ಗೆ ಆರೋಪ ಮಾಡಿದ್ದರು.

    ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹಾಸನ ಎಸ್​ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆರೋಪಿ ಪತ್ತೆಗಾಗಿ ಮೂರು ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ್ದರು. ಮೋಬೈಲ್ ನೆಟ್ ವರ್ಕ್ ಆಧಾರಿಸಿ ಆರೋಪಿ ರಾಮು ಹಾಗೂ ಆತನ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ.

    Post Views: 240

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.