Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೇ.9, 13ರಂದು ಮತಗಟ್ಟೆ ಶಾಲೆ, ಮತಏಣಿಕೆ ಕಚೇರಿಗಳಿಗೆ ರಜೆ : ರಾಜ್ಯ ಸರ್ಕಾರ ಆದೇಶ
    ಇತ್ತೀಚಿನ ಸುದ್ದಿ

    ಮೇ.9, 13ರಂದು ಮತಗಟ್ಟೆ ಶಾಲೆ, ಮತಏಣಿಕೆ ಕಚೇರಿಗಳಿಗೆ ರಜೆ : ರಾಜ್ಯ ಸರ್ಕಾರ ಆದೇಶ

    May 3, 2023
    Share

    ಬೆಂಗಳೂರು: ದಿನಾಂಕ 10-05-2023ರ ಬುಧವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ, ಸಂಘ-ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

    ಅಲ್ಲದೇ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವಂತ ಅಧಿಕಾರಿ, ಸಿಬ್ಬಂದಿ ಹಾಜರಾಗುವುದು ಕಡ್ಡಾಯಗೊಳಿಸಿದೆ. ಅಲ್ಲದೇ ಮತಗಟ್ಟೆ ಕೇಂದ್ರ, ಮತಏಣಿಕೆ ಕೇಂದ್ರಗಳಿಗೆ ರಜೆಯನ್ನು ಘೋಷಿಸಿ ಸರ್ಕಾರ ಆದೇಶಿಸಿದೆ.

    ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಮಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

    ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಈ ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ಧಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ದಿನಾಂಕ 09-05-2023ರ ಮಂಗಳವಾರದಂದು ಹಾಗೂ ಮತಏಣಿಕೆ ನಡೆಯುವ ದಿನಾಂಕ 13-05-2023ರಂದು ಮತ ಏಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧ ಪಟ್ಟ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.