Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸ್ಕೂಟರ್ ನಂಬರ್ ಮರೆಮಾಚಿ ಹುಚ್ಚಾಟ ಮಾಡಿದ ಸ್ಕೂಟರ್ ಚಾಲಕನಿಗೆ ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಸ್ಕೂಟರ್ ನಂಬರ್ ಮರೆಮಾಚಿ ಹುಚ್ಚಾಟ ಮಾಡಿದ ಸ್ಕೂಟರ್ ಚಾಲಕನಿಗೆ ದಂಡ

    April 7, 2025
    Share

    ಮಂಗಳೂರು : ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮೆಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ.

    ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ ಹೆಲ್ಮೆಟ್ ಧರಿಸದೆ ತೊಕ್ಕೊಟ್ಟು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋವನ್ನು ಸಾರ್ವಜನಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು.

    ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನಗರದ ಸಂಚಾರ ಪೊಲೀಸರು ಕಾರ್ಯಪ್ರವೃತ್ತರಾಗಿ ಸ್ಕೂಟರ್ ಹಾಗೂ ಸ್ಕೂಟರ್ ಸವಾರನ ಪತ್ತೆ ಹಚ್ಚಿದ್ದಾರೆ. ಸಂಚಾರ ನಿಯಮವನ್ನು ಉಲ್ಲಂಘಿಸಿರುವ ಕೆಎ-19-ಎಚ್‌ಟಿ-1944 ಸ್ಕೂಟರ್‌ನ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿದ್ದಾರೆ.

    ಹೆಲ್ಮೆಟ್ ಧರಿಸದೇ, ನಂಬ್ರ ಪ್ಲೇಟ್ ಮರೆಮಾಚಿರುವ ಬಗ್ಗೆ ದೋಷಪೂರಿತ ನಂಬ್ರ ಪ್ಲೇಟ್ ಬಳಕೆ, ನಿರ್ಲಕ್ಷ್ಯತನದ ಚಾಲನೆ, ಡಿ.ಎಲ್ ಇಲ್ಲದೇ ಚಾಲನೆ ಹಾಗೂ ಮೊಬೈಲ್ ಫೋನ್ ಬಳಕೆಯ ಆರೋಪದಲ್ಲಿ ಸವಾರನಿಗೆ 5,500 ರೂ. ದಂಡ ವಿಧಿಸಲಾಗಿದೆ ಎಂದು ಮಂಗಳೂರು ನಗರದ ಪೊಲೀಸರ ಪ್ರಕಟನೆ ತಿಳಿಸಿದೆ.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.