ಮುಂಬೈ : ನಗರದಲ್ಲಿ ಅನುಮಾನಾಸ್ಪ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆ ನವೆಂಬರ್ 1 ರಿಂದ ನವೆಂಬರ್ 15 ರವರೆಗೆ 15 ದಿನಗಳ ಕಾಲ ಮುಂಬೈನಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸೆಕ್ಷನ್ 37 ರ ಅಡಿಯಲ್ಲಿ 144 ಸೆಕ್ಷನ್ ಜಾರಿಗೆ ಮಾಡಲಾಗಿದೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 144 ಜಾರಿ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ. ಇನ್ನಷ್ಟು ನಿರ್ಬಂಧಗಳ ಸಂಪೂರ್ಣ ಪಟ್ಟಿಇಲ್ಲಿದೆ ಓದಿ
ಮುಂಬೈನಲ್ಲಿ ಸೆಕ್ಷನ್ 144: ನಿರ್ಬಂಧಗಳ ಸಂಪೂರ್ಣ ಪಟ್ಟಿಯನ್ನು ಪರಿಶೀಲಿಸಿ
5 ಕ್ಕಿಂತ ಹೆಚ್ಚು ಜನರು ಸಾರ್ವಜನಿಕವಾಗಿ ಸೇರುವುದನ್ನು ನಿಷೇಧಿಸಲಾಗಿದೆ.
ಮೆರವಣಿಗೆಗಳ ಮೇಲೆ ನಿಷೇಧ ಹೇರಲಾಗುವುದು.
ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.
ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಮೆರವಣಿಗೆಯಲ್ಲಿ ಸಂಗೀತ ಬ್ಯಾಂಡ್ ಗಳನ್ನು ನಿಷೇಧಿಸಲಾಗಿದೆ.
ಅನುಮತಿಯಿಲ್ಲದೆ ಸಾಮಾಜಿಕ ಕೂಟಗಳನ್ನು ನಿಷೇಧಿಸಲಾಗಿದೆ.
ಪ್ರತಿಭಟನೆ/ಉಪವಾಸ ಸತ್ಯಾಗ್ರಹವನ್ನು ನಿಷೇಧಿಸಲಾಗಿದೆ.
ಆದಾಗ್ಯೂ, ಮದುವೆ ಸಮಾರಂಭಗಳು ಮತ್ತು ಅಂತ್ಯಕ್ರಿಯೆಗಳಿಗೆ ನಿರ್ಬಂಧಗಳ ವ್ಯಾಪ್ತಿಯಿಂದ ವಿನಾಯಿತಿ ನೀಡಲಾಗಿದೆ.