Facebook Twitter Instagram
    Monday, October 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ- ರೂಢಿಗತ ಆರೋಪಿ ಬಂಧನ17.66 ಗ್ರಾಂ ಮಾದಕ ವಸ್ತು ಸಹಿತ ₹85 ಸಾವಿರ ಮೌಲ್ಯದ ಸೊತ್ತು ವಶ
    ಇತ್ತೀಚಿನ ಸುದ್ದಿ

    ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ- ರೂಢಿಗತ ಆರೋಪಿ ಬಂಧನ17.66 ಗ್ರಾಂ ಮಾದಕ ವಸ್ತು ಸಹಿತ ₹85 ಸಾವಿರ ಮೌಲ್ಯದ ಸೊತ್ತು ವಶ

    October 19, 2026
    Share

    ಉಡುಪಿ: ನಗರದ ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಉದ್ಯಾವರದ ಅಂಕುದ್ರು ನಿವಾಸಿ ವಿಜಯ್ ಅಲಿಯಾಸ್ ವಿಜಯ್ ಪೂಜಾರಿ (36) ಎಂದು ಗುರುತಿಸಲಾಗಿದ್ದು, ಆತನಿಂದ ಒಟ್ಟು ₹85 ಸಾವಿರ ಮೌಲ್ಯದ ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    .17ರಂದು ರಾತ್ರಿ ಸುಮಾರು 10.30ರ ವೇಳೆಗೆ ಭುಜಂಗ ಪಾರ್ಕ್‌ ಸಮೀಪ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ವರ್ತಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ, ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎನ್ನಲಾದ ವಿಜಯ್‌ನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.

    ಈ ವೇಳೆ ಆರೋಪಿ ತನ್ನ ಸ್ಕೂಟರ್‌ನ ಡಿಕ್ಕಿಯಲ್ಲಿ ಮಾದಕ ವಸ್ತುಗಳನ್ನು ಇರಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯಿಂದ 17.66 ಗ್ರಾಂ ತೂಕದ ಎಂಡಿಎಂಎ ಎಂದು ಉಲ್ಲೇಖಿಸಲಾದ ಆಂಫೆಟಮೈನ್/ಮೆಥಾಂಫೆಟಮೈನ್ ಹೊಂದಿರುವ ಒಂಬತ್ತು ಜಿಪ್ ಕವರ್‌ಗಳು, 2.18 ಗ್ರಾಂ ತೂಕದ ಬಣ್ಣದ ಮಾತ್ರೆ ಹಾಗೂ ಪುಡಿ, ತೂಕದ ಯಂತ್ರ, ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ್ದ ಸ್ಕೂಟರ್‌ ಸೇರಿದಂತೆ ₹85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾಷೆಗಳನ್ನುಕಲಿಯಿರಿ

    ಬಂಧಿತ ವಿಜಯ್ ವಿರುದ್ಧ ಈ ಹಿಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡು ಎನ್‌ಡಿಪಿಎಸ್ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಸೆ.24ರಂದು ಹಿರಿಯಡ್ಕ ಜೈಲಿನಿಂದ ಬಿಡುಗಡೆಯಾಗಿದ್ದ ಈತ ರೂಢಿಗತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 22(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

    ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ಪಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಿಎಸ್‌ಐ ಭರತೇಶ್ ಕಂಕಣವಾಡಿ, ರತ್ನಾಕರ್ ಕೆ. ಹಾಗೂ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Post Views: 9

    Related Posts

    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಮೂವರು ಶೂಟರ್ಗಳ ಬಂಧನ!!

    October 19, 2026

    ಬಂಟ್ವಾಳ: “ಹಣ ಕೇಳುತ್ತೀಯಾ, ಮುಗಿಸಿಬಿಡುತ್ತೇನೆ” ಎಂದು ವ್ಯಕ್ತಿಗೆ ಚೂರಿ ಇರಿತ

    October 19, 2026

    ‘ಪೆನ್ ಡ್ರೈವ್’ ಪ್ರಕರಣ:HDK ದೇವಸ್ಥಾನಕ್ಕೆ ಬರಲಿ, ಪ್ರಮಾಣ ಮಾಡ್ತೀನಿ; ಸಂಪುಟದಿಂದ ವಜಾ ಮಾಡುವಂತೆ ಮೋದಿಗೆ ದೂರು- ಶ್ರೇಯಸ್

    October 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಮೂವರು ಶೂಟರ್ಗಳ ಬಂಧನ!!

    October 19, 2026

    ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ- ರೂಢಿಗತ ಆರೋಪಿ ಬಂಧನ17.66 ಗ್ರಾಂ ಮಾದಕ ವಸ್ತು ಸಹಿತ ₹85 ಸಾವಿರ ಮೌಲ್ಯದ ಸೊತ್ತು ವಶ

    October 19, 2026

    ಬಂಟ್ವಾಳ: “ಹಣ ಕೇಳುತ್ತೀಯಾ, ಮುಗಿಸಿಬಿಡುತ್ತೇನೆ” ಎಂದು ವ್ಯಕ್ತಿಗೆ ಚೂರಿ ಇರಿತ

    October 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.