Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ- ಯುವಕನ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ- ಯುವಕನ ಬಂಧನ

    January 17, 2026
    Share

    ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡವು ಯುವಕನೊಬ್ಬನನ್ನು ಬಂಧಿಸಿ ನಿಷೇಧಿತ ಮಾದಕವಸ್ತು ವಶಪಡಿಸಿಕೊಂಡಿರುವ ಘಟನೆ ಜನವರಿ 16, 2026ರಂದು ನಡೆದಿದೆ.

    ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ, ಉಳ್ಳಾಲ ತಾಲೂಕು ಮುನ್ನೂರು ಗ್ರಾಮದ ರಾಣಿಪುರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ–ಸಜಿಪ–ಮುನ್ನೂರು ನಿವಾಸಿ ಇಮ್ಮಿಯಾಜ್ @ ಮೊಹಮ್ಮದ್ ಇಮ್ಮಿಯಾಜ್ ಎಂಬಾತನು ಎಂಡಿಎಮ್‌ಎ ಮಾದಕವಸ್ತುವನ್ನು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ತನ್ನ ಗಿರಾಕಿಗಳಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ಆಧರಿಸಿ ಪಂಚರ ಸಮ್ಮುಖದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    ದಾಳಿಯ ವೇಳೆ ಆರೋಪಿಯಿಂದ ಸುಮಾರು ರೂ.65,000 ಮೌಲ್ಯದ 13 ಗ್ರಾಂ ತೂಕದ ಎಂಡಿಎಮ್‌ಎ ಮಾದಕವಸ್ತು, ರೂ.2,000 ನಗದು, ಒಂದು ವಿವೋ ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆ–1985ರ ಸೆಕ್ಷನ್‌ಗಳು 8(c), 22(a), 22(b) ಹಾಗೂ 22(c) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಉಳ್ಳಾಲ ಪೊಲೀಸ್ ಠಾಣೆ ತಿಳಿಸಿದೆ.

    Post Views: 80

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.