Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ

    April 12, 2025
    Share

     ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಆಸೀಫ್ (24), ಅಸ್ಗರ್ ಆಲಿ (31) ಮತ್ತು ಮೊಹಮ್ಮದ್ ರಶೀಮ್ (24) ಎಂದು ಗುರುತಿಸಲಾಗಿದೆ.
    ಪೊಲೀಸರ ಪ್ರಕಾರ, ಆರೋಪಿಗಳು ಬೆಂಗಳೂರಿನಿಂದ ಖಾಸಗಿ ಬಸ್‌ನಲ್ಲಿ ಪಾರ್ಸೆಲ್ ಮೂಲಕ ಎಂಡಿಎಂಎ ತರಿಸಿಕೊಂಡು, ಇನ್ನೋವಾ ಕಾರಿನಲ್ಲಿ ಸುರತ್ಕಲ್ ಪರಿಸರದ ಮುಕ್ಕ-ಮಾಲೆಮಾರ್ ಬೀಚ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಎಂಡಿಎಂಎ ಮಾರಾಟ ಮಾಡುತ್ತಿದ್ದ ಇನ್ನೋವಾ ಕಾರನ್ನು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದಾರೆ.

    ಆರೋಪಿಗಳಿಂದ ರೂ. 1 ಲಕ್ಷ ಮೌಲ್ಯದ 10 ಗ್ರಾಂ ಎಂಡಿಎಂಎ, ರೂ. 4000 ನಗದು, 4 ಮೊಬೈಲ್ ಫೋನ್‌ಗಳು ಮತ್ತು KA-31-N-6311 ನೋಂದಣಿ ಸಂಖ್ಯೆಯ ಟೊಯೊಟಾ ಇನ್ನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 9,24,000 ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
    ಪೊಲೀಸರು ತಿಳಿಸಿರುವಂತೆ, ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯದಲ್ಲಿ ತೊಡಗಿದ್ದರು. ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ. ಬಂಧಿತ ಆರೋಪಿಗಳ ಪೈಕಿ ಮೊಹಮ್ಮದ್ ಅಸೀಫ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಹಲ್ಲೆ ಪ್ರಕರಣಗಳು ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಗಳು ಐಷಾರಾಮಿ ಜೀವನ ನಡೆಸುವ ಆಸೆಯಿಂದ ಈ ದಂಧೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ಅವರ ನೇತೃತ್ವದಲ್ಲಿ ಪಿಎಸ್‌ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

    Post Views: 220

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.