Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ದೂರು ನೀಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ಆರೋಪ – ಹೆಡ್ ಕಾನ್‌ಸ್ಟೇಬಲ್ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಮಂಗಳೂರು : ದೂರು ನೀಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ಆರೋಪ – ಹೆಡ್ ಕಾನ್‌ಸ್ಟೇಬಲ್ ಸಸ್ಪೆಂಡ್

    February 9, 2024
    Share

    ಮಂಗಳೂರು : ದೂರು ನೀಡಲು ಬಂದಿರುವ ಮಹಿಳೆಯ ಮೊಬೈಲ್ ಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ಆರೋಪದಲ್ಲಿ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬಾತನನ್ನು ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಮಹಿಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಕಾವೂರು ಠಾಣೆಗೆ ಬಂದಿದ್ದ ವೇಳೆ ಹೆಡ್ ಕಾನ್‌ಸ್ಟೇಬಲ್‌ ಸಂತೋಷ್‌ ಆಕೆಯ ಮೊಬೈಲ್ ನಂಬ‌ರ್ ಪಡೆದಿದ್ದ. ಆ ಬಳಿಕದಿಂದ ಆಕೆಗೆ ಅಸಭ್ಯವಾದ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆ. ನಿನ್ನ ಇಡಿ ಕುಟುಂಬವನ್ನು ಮುಗಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸಂತೋಷ್ ಬೆದರಿಕೆ, ಕಿರುಕುಳದಿಂದ ಬೇಸತ್ತ ಮಹಿಳೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಆತ ಬೆದರಿಕೆ ಒಡ್ಡಿರುವ ಆಡಿಯೋ ಸಂದೇಶವನ್ನು ಕಮಿಷನರ್ ಅವರಿಗೆ ನೀಡಿದ್ದಾರೆಂದು ತಿಳಿದು ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನ‌ರ್, ಹೆಡ್ ಕಾನ್‌ಸ್ಟೇಬಲ್ ಸಂತೋಷ್‌ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೇ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಸೂಚಿಸಿದ್ದಾರೆ.

    Post Views: 277

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.