Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ, ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ, ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಜೀವಾವಧಿ ಶಿಕ್ಷೆ

    October 21, 2022
    Share

    ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರವೀಣ್‌ ಸಾಲ್ಯಾನ್‌ (35) ಮೇಲಿದ್ದ ಆರೋಪವು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕೊ)ದಲ್ಲಿ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

    ಪ್ರಕರಣದ ವಿವರ:

    ಬಜಪೆ ಸಿದ್ಧಾರ್ಥ ನಗರ ನಿವಾಸಿ ಪ್ರವೀಣ್‌ ಸಾಲ್ಯಾನ್‌ 2015ರ ಫೆ. 16ರಂದು ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ. ಅನಂತರ ತಾನು ಪ್ರೀತಿಸುತ್ತಿರುವುದಾಗಿ ನಾಟಕವಾಡಿದ ಆತ ನಿರಂತರ ಮೊಬೈಲ್‌ ಮತ್ತು ಸಾಮಾಜಿಕ ಜಾಲತಾಣ ಮೂಲಕ ಆಕೆಯನ್ನು ಸಂಪರ್ಕಿಸುತ್ತಿದ್ದ. ತನ್ನ ಗುಪ್ತಾಂಗದ ಚಿತ್ರಗಳನ್ನು ಆಕೆಗೆ ಕಳುಹಿಸಿ, ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದ. ಬಳಿಕ ಅಕೆಯಲ್ಲಿ ಒಂದು ಲಕ್ಷ ರೂ. ಹಣ ಅಥವಾ ಚಿನ್ನ ನೀಡಬೇಕು ಎಂದು ಬೇಡಿಕೆಯಿಟ್ಟು ಬೆದರಿಸಿದ್ದ. ಇದರಿಂದ ಆತಂಕಗೊಂಡ ಆಕೆ 2015ರ ಜೂ. 10ರಂದು ಬೆಳಗ್ಗೆ 5ರಿಂದ 6.15ರ ನಡುವೆ ತನ್ನ ಮನೆಯ ಬೆಡ್‌ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

    ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಎಫ್‌ಟಿಎಸ್‌ಸಿ-1 (ಪೋಕೊ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿ ಅಪರಾಧಿಗೆ ಐಪಿಸಿ 305ರಡಿ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಹಾಗೂ ಸೆಕ್ಷನ್‌ 12ರಡಿ (ಪೋಕೊ) 3 ವರ್ಷ ಕಠಿನ ಸಜೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.

    Post Views: 181

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.