ಮಂಗಳೂರು:ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಪಲ್ಟಿಯಾಗಿದೆ
ಸ್ಥಳೀಯರ ಮಾಹಿತಿ ಪ್ರಕಾರ ಇಳಿಜಾರಿನಲ್ಲಿ ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ಚಪ್ಪಲ್ ಎಕ್ಸೆಲೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆಟೋ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.