ಬಂಟ್ವಾಳ: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ
ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಡಿಕ್ಕಿ ಸಂಭವಿಸಿದೆ.
ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.
ಆದರೆ ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆಯಾದರೂ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ತುಂಬೆಯಲ್ಲಿರುವ ಸ್ಟೀಲ್ ಪ್ಯಾಕ್ಟರಿಯೊಂದಕ್ಕೆ ಬಂದಿರುವ ಗ್ರಾಹಕರು ಹಾಗೂ ಪ್ಯಾಕ್ಟರಿಯ ಮಾಲಕರ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಭೇಟಿ ನೀಡಿದ್ದಾರೆ. ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದರಿಂದ ಕೆಲ ಕಾಲ ಸುಗಮ ವಾಹನ ಸಮಚಾರಕ್ಕೆ ಅಡಚಣೆ ಉಂಟಾಗಿತ್ತು. ಕೂಡಲೇ ಸ್ತಳೀಯ ಪೊಲೀಸರು ತೆರಳಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.