ವಿಟ್ಲ: ಇನ್ ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡ ಬಾಲಕಿಯರಿಬ್ಬರಿಗೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧ ಪಟ್ಟಂತೆ ಯುವಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸಾಲೆತ್ತೂರು ಮೂಲದ ಬಾಲಕಿಗೆ ಇನ್ ಸ್ಟಾಗ್ರಾಂನಲ್ಲಿ ಕೇರಳ ಮೂಲದ ಯುವಕನೋರ್ವ ಹುಡುಗಿಯ ಹೆಸರಿನಲ್ಲಿ ಪರಿಚಯವಾಗಿದ್ದನು. ಬಳಿಕ ಇವರಿಬ್ಬರ ಮಧ್ಯೆ ಆತ್ಮೀಯತೆ ಬೆಳೆದು, ದೈಹಿಕ ಸಂಬಂಧದ ಹಂತಕ್ಕೆ ತಲುಪಿದೆ.
ಇನ್ನು ಇದೇ ರೀತಿ ಬಾಲಕಿಯ ಪಕ್ಕದ ಮನೆಯಲ್ಲಿ ವಾಸವಿದ್ದ ಇನ್ನೋರ್ವ ಬಾಲಕಿಗೂ ಇದೇ ವ್ಯಕ್ತಿಯ ಪರಿಚಯವಾಗಿದೆ. ನಂತರ ಬಾಲಕಿಯರಿಬ್ಬರೂ ಈ ವಿಷಯವಾಗಿ ಮಾತನಾಡಿಕೊಂಡಾಗ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕ ಒಬ್ಬನೇ ಎಂದು ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ಇಬ್ಬರು ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿದ ಯುವಕನ ವಿರುದ್ಧ ಬಾಲಕಿಯರ ಮನೆಯವರು ದೂರು ನೀಡಿದ್ದರು. ಇನ್ನು ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇಬ್ಬರು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ, ಚೈಲ್ಡ್ ಕೇರ್ ಸಂಸ್ಥೆಯವರು ತನಿಖೆ ನಡೆಸುತ್ತಿದೆ.