Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಿಷಪ್ ಹೌಸ್​​ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ
    ಇತ್ತೀಚಿನ ಸುದ್ದಿ

    ಮಂಗಳೂರು: ಬಿಷಪ್ ಹೌಸ್​​ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ

    March 9, 2023
    Share

    ಮಂಗಳೂರು: ಬಿಷಪ್ ಹೌಸ್​ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಮಠದಲ್ಲಿರುವ ಸಿಎಸ್ಐ ಬಿಷಪ್ ಹೌಸ್​ನಲ್ಲಿ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ ಸಂತ್ರಸ್ಥ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ಸಿಎಸ್ಐ ಬಿಷಪ್ ಹೌಸ್ ಪ್ರಾಂತ ಕಚೇರಿಯ ಖಜಾಂಚಿ, ಕಾನೂನು ಸಲಹೆಗಾರ ಸೇರಿದಂತೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಸಂತ್ರಸ್ಥ ಮಹಿಳೆ ಕಳೆದ 10 ವರ್ಷಗಳಿಂದ ಕ್ರೈಸ್ತ ಧರ್ಮದ ಪ್ರತ್ಯೇಕ ಪಂಗಡವಾದ ಚರ್ಚ್ ಆಫ್ ಸೌತ್ ಇಂಡಿಯಾ (CSI) ಬಿಷಪ್ ಹೌಸ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಕಳೆದ 4 ವರ್ಷಗಳಿಂದ ಖಜಾಂಚಿ ವಿನ್ಸೆಂಟ್ ಪಾಲನ್ನ, ಕಾನೂನು ಸಲಹೆಗಾರ ಫಾದರ್ ನೋಯಲ್ ಕರ್ಕಡ ದೈಹಿಕ, ಮಾನಸಿಕ, ಲೈಂಗಿಕ ಕಿರುಕುಳ ನೀಡಿದ್ದಾರೆ.

    ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಕಾನೂನು ಸಲಹೆಗಾರ ಫಾದರ್ ನೋಯಲ್ ಕರ್ಕಡ ಎಂಬಾತ ಮಹಿಳೆಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ದೂರಿದ್ದಾರೆ. ಕರುಣಾಕರ ಕುಂದರ, ಮನೋಹರ ಅಮ್ಮನ್ನ, ಸುಜಾತ, ವಿಲಿಯಂ ಕೇರಿ ಎಂವವರು ನನ್ನ ತೇಜೋವಧೆ ಆಗುವ ರೀತಿ ವರ್ತಿಸಿದ್ದಾರೆ ಎಂದು ದೂರಿದ್ದಾರೆ.

    ಅಲ್ಲದೇ ಕೆಲಸದಿಂದ ತೆಗೆಯಲು ಯತ್ನಿಸಿರುವ ಬಗ್ಗೆ ಸಂತ್ರಸ್ಥ ಮಹಿಳೆ ಆರೋಪ ಮಾಡಿದ್ದಾರೆ. ಸಂತ್ರಸ್ಥ ಮಹಿಳೆ ಮೈಸೂರಿನ ಒಡನಾಡಿ ಸಂಸ್ಥೆಗೂ ದೂರು ನೀಡಿದ್ದಾರೆ. ಈ ಹಿನ್ನೆಲೆ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಸಂತ್ರಸ್ಥೆಯನ್ನು ಖುದ್ದು ಭೇಟಿಯಾಗಿದ್ದಾರೆ. ಸದ್ಯ ಸ್ಟ್ಯಾನ್ಲಿ ಸಂತ್ರಸ್ಥ ಮಹಿಳೆಯ ಬೆಂಬಲಕ್ಕೆ ನಿಂತಿದ್ದಾರೆ. ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ 1860(U/s-354(A), 354(D), 506, 34, 504, 354 ಕಲಂ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಸತ್ಯಾಸತ್ಯತೆ ತಿಳಿಯಲು ತನಿಖೆ ನಡೆಸಿದ್ದಾರೆ.

    Post Views: 236

    Related Posts

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.