ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೊಬ್ಬನನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.




