Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಬಾಲಕಿಗೆ ಲೈಂಗಿಕ ದೌರ್ಜನ್ಯ-ಆರೋಪಿಗೆ ಜೀವಾವಧಿ ಶಿಕ್ಷೆ..!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಬಾಲಕಿಗೆ ಲೈಂಗಿಕ ದೌರ್ಜನ್ಯ-ಆರೋಪಿಗೆ ಜೀವಾವಧಿ ಶಿಕ್ಷೆ..!

    February 24, 2023
    Share

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ  ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪಿತ್ತಿದೆ.

    ಬಂಟ್ವಾಳ ತಾಲೂಕಿನ ಗ್ರಾಮವೊಂದರ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ವಯಸ್ಸಿನ ಬಾಲಕಿಯ ಇಚ್ಚೆಗೆ ವಿರುದ್ಧವಾಗಿ 2019ರ ಫೆ.11ರಂದು ಮಧ್ಯಾಹ್ನ 1ಕ್ಕೆ ಆರೋಪಿ ಉಳಿ ಗ್ರಾಮದ ಪುಲ್ಲೇರಿ ಮನೆಯ ಸತೀಶ್ ಪೂಜಾರಿ (35) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ 2019ರ ಮಾರ್ಚ್ 22ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸೈದುಲ್ ಅಡಾವತ್ ಆರೋಪಿ ಸತೀಶ್ ಪೂಜಾರಿಯನ್ನು ಬಂಧಿಸಿ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ತನಿಖೆ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಉಪವಿಭಾಗಧಿಕಾರಿ ಕಚೇರಿಯ ಹೆಚ್‌ಸಿ ಸೀತರಾಮ ಹಾಗೂ ಪಿಸಿ ಸಫೀನಾ ತನಿಖೆಗೆ ಸಹಕರಿಸಿದ್ದರು. ಗುರುವಾರ ನ್ಯಾಯಾಲಯವು ಆರೋಪಿಗೆ ಬೇರೆ ಬೇರೆ ಕಲಂನಡಿ 10 ವರ್ಷ ಜೈಲುವಾಸ ಹಾಗೂ 10 ಸಾವಿರ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಿದೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಸಹನಾ ದೇವಿ ವಾದಿಸಿದ್ದರು.  

    Post Views: 164

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.