Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು- ಆರೋಪಿಗೆ ಶಿಕ್ಷೆ ಪ್ರಕಟ
    ಇತ್ತೀಚಿನ ಸುದ್ದಿ

    ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು- ಆರೋಪಿಗೆ ಶಿಕ್ಷೆ ಪ್ರಕಟ

    December 20, 2024
    Share

    ಉಡುಪಿ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ(34)ನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ.

    ಕಾರ್ಕಳ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಹಿಂದೆ ಪ್ರಕರಣ ದಾಖಲಾಗಿತ್ತು. ಬಾಲಕಿಯನ್ನು ಪರಿಚಯಿಸಿಕೊಂಡ ಆರೋಪಿ ಬಾಲಕಿ ಜತೆ ಮೊಬೈಲ್‌ ಸಂಪರ್ಕ ಇರಿಸಿಕೊಂಡಿದ್ದ. ಆಕೆಗೆ ಕರೆ ಮಾಡಿ ಜನವಸತಿ ಇಲ್ಲದ ಮನೆಗೆ ಮತ್ತು ಹಾಡಿಗೆ ಬರುವಂತೆ ಬೆದರಿಕೆ ಒಡ್ಡಿ ಕರೆಸಿಕೊಳ್ಳುತಿದ್ದ. ಬಾಲಕಿಯನ್ನು ಕಾಡಿಗೆ ಬರಹೇಳಿದ್ದ ಆತ ಆಕೆಯ ಜತೆ ಒತ್ತಾಯ ಪೂರ್ವಕವಾಗಿ ದೈಹಿಕ ಸಂಬಂಧ ಬೆಳೆಸಿದ್ದ. ತದನಂತರದಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿತ್ತು.

    ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಆಕೆ ಗರ್ಭಿಣಿ ಎಂದು ತಿಳಿಸಿದ್ದರು. ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ 4 ಮಂದಿ ವಿರುದ್ಧ ಅಂದು ದೋಷಾರೋಪಣೆ ಸಲ್ಲಿಕೆಯಾಗಿತ್ತು. ಆಗಿನ ಸರ್ಕಲ್‌ ಇನ್ಸ್‌ಪೆಕ್ಟರ್‌ ನಾಗರಾಜ ಟಿ.ಡಿ. ತನಿಖೆ ನಡೆಸಿದ್ದರು. ಕಾರ್ಕಳ ಇನ್ಸ್‌ಪೆಕ್ಟರ್‌ ನಾಗೇಶ್‌ ಕೆ. ಅವರು ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
    ಪ್ರಕರಣದಲ್ಲಿ ಒಟ್ಟು 45 ಸಾಕ್ಷಿಗಳ ಪೈಕಿ 26 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. 1ನೇ ಆರೋಪಿ ಚಂದ್ರಶೇಖರ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾದ ಹಿನ್ನಲೆಯಲ್ಲಿ ಆತನಿಗೆ ಜೈಲು ಶಿಕ್ಷೆ, 21 ಸಾವಿರ ರೂ.ದಂಡ, ಸರಕಾರಕ್ಕೆ 6 ಸಾವಿರ ರೂ. ಸಂತ್ರಸ್ತೆಗೆ 15 ಸಾವಿರ ರೂ. ಹಾಗೂ ಸರಕಾರದಿಂದ ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿರುತ್ತಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.

    Post Views: 234

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.