Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡಬಿದಿರೆ: ಮದುಕನ ಲೈಂಗಿಕ ಕಿರುಕುಳಕ್ಕೆ ವಿಧ್ಯಾರ್ಥಿನಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮೂಡಬಿದಿರೆ: ಮದುಕನ ಲೈಂಗಿಕ ಕಿರುಕುಳಕ್ಕೆ ವಿಧ್ಯಾರ್ಥಿನಿ ಆತ್ಮಹತ್ಯೆ

    November 11, 2022
    Share

    ಮೂಡಬಿದಿರೆ: ಮದುಕನೊಬ್ಬ ನೀಡುತ್ತಿದ್ದ ಲೈಂಗಿಕ ಕಿರುಕುಳಕ್ಕೆ ಮನನೊಂದು ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಶ್ರೀಧರ ಪುರಾಣಿಕ್‌ನನ್ನು (62) ಎಂದು ಗುರುತಿಸಲಾಗಿದೆ. ಮೂಡಬಿದಿರೆ ಖಾಸಗಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮಂಗಳವಾರ ತರಗತಿಯಲ್ಲಿ ಕಿವಿನೋವು ಕಾಣಿಸಿಕೊಂಡಿತ್ತು. ಹೀಗಾಗಿ, ಕಾಲೇಜಿನ ಪ್ರಾಂಶುಪಾಲರು ಆಕೆಯನ್ನು ಮನೆಗೆ ಕಳುಹಿಸಿದ್ದರು. ವಿದ್ಯಾರ್ಥಿನಿಯನ್ನು ಮನೆಗೆ ತಲುಪಿಸುವಂತೆ ಪರಿಚಿತರಾದ ಕಾಲೇಜಿನ ನಿವೃತ್ತ ಕ್ಲರ್ಕ್‌ ಶ್ರೀಧರ ಪುರಾಣಿಕ್‌ ಎಂಬುವರನ್ನು ಜೊತೆಗೆ ಕಳುಹಿಸಿದ್ದರು.ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿನಿಗೆ ಶ್ರೀಧರ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿ, ತನ್ನ ಆತ್ಮಹತ್ಯೆಗೆ ಶ್ರೀಧರ ಪುರಾಣಿಕ್ ಅವರೇ ಕಾರಣ ಎಂದು ತಿಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಡೆತ್‌ನೋಟ್‌ನಲ್ಲಿ ಬರೆದು ಮನೆಯ ಪಕ್ಕದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಈ ಕುರಿತು ಪಣಂಬೂರು ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈಗಾಗಲೇ ಆರೋಪಿ ಶ್ರೀಧರ ಪುರಾಣಿಕ್‌ನನ್ನು (62) ಬಂಧಿಸಿ, ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Post Views: 172

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.