Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡಬಿದ್ರಿ: ಅನುದಾನ ಬಿಡುಗಡೆಯಲ್ಲಿ ತಾರತಮ್ಯ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ
    ಇತ್ತೀಚಿನ ಸುದ್ದಿ

    ಮೂಡಬಿದ್ರಿ: ಅನುದಾನ ಬಿಡುಗಡೆಯಲ್ಲಿ ತಾರತಮ್ಯ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ

    November 1, 2022
    Share

    ಮೂಡಬಿದ್ರಿ: ಹುಡ್ಕೊ ಕಾಲನಿಯ ಪರಿಶಿಷ್ಟ ಜಾತಿ ಮೀಸಲು ವಾರ್ಡ್‌ಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಪುರಸಭೆ ಸದಸ್ಯ ಕೊರಗಪ್ಪ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.

    ನನ್ನ ವಾರ್ಡ್‌ನಲ್ಲಿ ಚರಂಡಿ ನಿರ್ಮಾಣಕ್ಕೆ ಮನವಿ ನೀಡಿದ್ದೆ. ವಿಷಯವೇ ಅಜೆಂಡಾದಲ್ಲಿ ಇಲ್ಲ. ಅನುದಾನವು ಬಿಡುಗಡೆಯಾಗಿಲ್ಲ. ನನ್ನ ಕ್ಷೇತ್ರವನ್ನು ಕಡೆಗಣಿಸಿದ್ದೀರಿ. ಇದನ್ನು ನಾನು ಖಂಡಿಸುತ್ತೇನೆ ಎಂದು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದರು.

    ನಾನು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಅಂದಾಜುಪಟ್ಟಿ ತಯಾರಿಸಲು ಎಂಜಿನಿಯರ್‌ಗೆ ಸೂಚಿಸಿದ್ದೆವು. ಪುರಸಭೆ ಸದಸ್ಯರಾಗಿ ಈ ರೀತಿ ವರ್ತಿಸಿರುವುದು ಖಂಡನಾರ್ಹ ಎಂದು ಅಧ್ಯಕ್ಷರು ಹೇಳಿದರು.

    ಮಹಿಳಾ ಸದಸ್ಯರೂ ಇರುವ ಈ ಸಭೆಯಲ್ಲಿ ನೀವು ಅಂಗಿ ಬಿಚ್ಚಿದ್ದು ಸರಿ ಅಲ್ಲ ಎಂದು ಉಪಾಧ್ಯಕ್ಷೆ ಸುಜಾತಾ ಶಶಿಧರ್ ಹೇಳಿದರು.

    ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಪೂಜಾರಿ ಸೇರಿಂತೆ ಬಿಜೆಪಿಯ ಸದಸ್ಯರು ಆಕ್ಷೇಪಿಸಿದರು. ಇಬ್ಬರ ಮಧ್ಯೆ ಸ್ವಲ್ಪ ಹೊತ್ತು ಆರೋಪ ಪ್ರತ್ಯಾರೋಪ ನಡೆಯಿತು.

    Post Views: 170

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.