ಮಂಗಳೂರು; ತ್ರಿವಳಿ ಕೊಲೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೇರಲಾದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ.
ಆ.5ರಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು, ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ.