ಬೆಳ್ತಂಗಡಿ: ತಾಲೂಕಿನಲ್ಲಿ 14 ವರ್ಷದ 9ನೇ ತರಗತಿ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮೃತ ಬಾಲಕ ಶ್ರವಣ್ ಬಿ.ಕೆ ಎಂದು ತಿಳಿಯಲಾಗಿದೆ.ಈತ ಬೆಳ್ತಂಗಡಿ ನಗರದ ಹಳೆಕೋಟೆಯ ವಾಣಿ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿಯಾಗಿದ್ದನು.
ಶ್ರವಣ್ ಆ.29 ಶನಿವಾರ ಸಂಜೆ ತನ್ನ ಹುಟ್ಟುಹಬ್ಬವನ್ನು ಮನೆಯಲ್ಲಿ ಆಚರಿಸಿಕೊಂಡಿದ್ದ. ಆದರೆ ಆ.30 ಭಾನುವಾರ ಬೆಳಗ್ಗೆ ಮನೆಯ ಮೇಲ್ಛಾವಣಿಗೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳದಲ್ಲಿ ಬಾಲಕ ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬೇಜಾರಿನಿಂದ ಈ ನಿರ್ಧಾರ ತೆಗೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತಂದೆ ಭರತ್ ಗೌಡ ತಾಯಿ ಮತ್ತು ಓರ್ವ ಸಹೋದರಿಯನ್ನು ಶ್ರವಣ್ ಅಗಲಿದ್ದಾನೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




