Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್‌ ಸಿಬ್ಬಂದಿ ಬಲಿ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್‌ ಸಿಬ್ಬಂದಿ ಬಲಿ..!

    February 12, 2025
    Share

    ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೊಲೀಸ್‌ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು (ಫೆ.11) ಸಂಭವಿಸಿದೆ.

    ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ ಎಂದು ತಿಳಿಯಲಾಗಿದೆ.

    ಅವಿವಾಹಿತನಾಗಿದ್ದ ಅಭಿಷೇಕ್ ಅವರು 2020 ರಲ್ಲಿ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ಎಚ್.ಸಿ.ಯಾಗಿ ನೇಮಕಗೊಂಡಿದ್ದರು. ಅ ಬಳಿಕ ಟ್ರಾಫಿಕ್ ಪೋಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಒಂದು ವರ್ಷದ ಹಿಂದೆ ಬೆನ್ನುಮೂಳೆಯ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬ್ಲಡ್ ಕ್ಯಾನ್ಸರ್ ಕಂಡು ಬಂದಿತ್ತು.

    ಅ ಬಳಿಕ ಸುಮಾರು 8 ತಿಂಗಳಿನಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.

    ಅಭಿಷೇಕ್ ಅವರ ತಂದೆ ಕೂಡ ಪೋಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿತ್ತಿದ್ದು, ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ ಎಂದು ಹೇಳಲಾಗಿದೆ.

    ಅಭಿಷೇಕ್ ಅವರ ಮೃತದೇಹವನ್ನು ಹುಟ್ಟೂರು ದಾವಣಗೆರೆ ಜಿಲ್ಲೆಗೆ ಕೊಂಡು ಹೋಗಿದ್ದು, ಅಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.

    Post Views: 150

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.