ಬೆಂಗಳೂರು: ಕರ್ನಾಟಕ ಸಿಎಂ ಆಯ್ಕೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಆಯ್ಕೆಯಾಗಿದ್ದರೆ, ಡಿಕೆ ಶಿವಕುಮಾರ್ ಗೆ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಈ ಆಯ್ಕೆ ನಡೆದಿರೋದು ಅಧಿಕಾರ ಹಂಚಿಕೆ ಸೂತ್ರದಿಂದ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷದಕ್ಕೆ ಸ್ಪಷ್ಟ ಬಹುಮತ ವಿಧಾನಸಭಾ ಚುನಾವಣೆಯಲ್ಲಿ ಬಂದು ಐದು ದಿನಗಳ ನಂತ್ರ, ಇಂದು ಕರ್ನಾಟಕ ಸಿಎಂ ಆಯ್ಕೆ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳಿಂದ ಸಿಎಂ ಹುದ್ದೆಗಾಗಿ ನಡೆಯುತ್ತಿದ್ದಂತ ಗದ್ದುಗೆ ಗುದ್ದಾಟಕ್ಕೆ ಹೈಕಮಾಂಡ್ ಕೊನೆಗೂ ಅಧಿಕಾರ ಹಂಚಿಕೆ ಸೂತ್ರದ ಮೂಲಕ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ಹಂಚಿಕೆ ಸೂತ್ರಕ್ಕೆ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಒಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೊದಲ 30 ತಿಂಗಳ ಅವಧಿಗೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ. ಆ ಬಳಿಕ ಎರಡೂವರೆ ವರ್ಷ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಮುನ್ನಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಸಂಜೆ 7ಕ್ಕೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಹೆಸರು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.