Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ ಇನ್ಮುಂದೆ ಗಣ್ಯರ ಸಂಚಾರದ ವೇಳೆ ಸೈರನ್ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ ಇನ್ಮುಂದೆ ಗಣ್ಯರ ಸಂಚಾರದ ವೇಳೆ ಸೈರನ್ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ

    July 22, 2025
    Share

    ಬೆಂಗಳೂರು : ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ.

    ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದಲ್ಲದೆ, ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ.

    ವಿಐಪಿ ಸಂಚಾರದ ವೇಳೆ, ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ. ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ.

    Post Views: 226

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.