Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ತಂಗಿ ಲಿವರ್‌ ದಾನ ಮಾಡಿದರೂ ಅಕ್ಕ ಉಳಿಯಲಿಲ್ಲ..!
    ಇತ್ತೀಚಿನ ಸುದ್ದಿ

    ಪುತ್ತೂರು: ತಂಗಿ ಲಿವರ್‌ ದಾನ ಮಾಡಿದರೂ ಅಕ್ಕ ಉಳಿಯಲಿಲ್ಲ..!

    January 26, 2024
    Share

    ಪುತ್ತೂರು: ಲಿವರ್‌ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್‌ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ.

    ಪುತ್ತೂರು ನೆಹರೂ ನಗರದ ದಿ| ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್‌ ವೈಫಲ್ಯದಿಂದ ಮೃತಪಟ್ಟಿದ್ದಾರೆ.

    ಐಶ್ವರ್ಯ ಅವರಿಗೆ ಜಾಂಡೀಸ್‌ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್‌ ಹಾನಿಯಾಗಿದ್ದು, ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಮಾಡಬೇಕೆಂದು ತಿಳಿಸಿದ್ದರು.

    ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್‌ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ, ಅಕ್ಕರೆ ಹೊಂದಿದ್ದ ಬ್ಯಾಂಕ್‌ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್‌ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್‌ ದಾನ ಮಾಡಿದ್ದರೂ ವಿಧಿಯಾಟ ಬೇರೆಯದೇ ಆಗಿತ್ತು. ಐಶ್ವರ್ಯ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್‌ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಎಂಜಿನಿಯರಿಂಗ್‌ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿಯೂ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.