Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕೊಲೆ ಪ್ರಕರಣದ ಮರು ತನಿಖೆಗೆ ಎಸ್‌ಐಟಿ ನೇಮಕ- ರಾಜ್ಯ ಸರಕಾರ ಆದೇಶ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕೊಲೆ ಪ್ರಕರಣದ ಮರು ತನಿಖೆಗೆ ಎಸ್‌ಐಟಿ ನೇಮಕ- ರಾಜ್ಯ ಸರಕಾರ ಆದೇಶ

    February 21, 2026
    Share

    ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್, ಡಿವೈಎಸ್‌ಪಿ ಎಂಆ‌ರ್ ಹರೀಶ್ ಅವರಿದ್ದಾರೆ.

    2022ರ ಡಿ.18ರಂದು ಶಿಬಾಜೆಯಲ್ಲಿ ಕೆಲಸ ಮಾಡುತ್ತಿದ್ದ ತೋಟದ ಒಳಗೆ ಶ್ರೀಧರ ಅವರ ಕೊಲೆ ನಡೆದಿತ್ತು.ಈ ಪ್ರಕರಣದಲ್ಲಿ ಹಲವಾರು ಪ್ರಭಾವಿಗಳು ಭಾಗಿಯಾಗಿರುವ ಆರೋಪ ಆರಂಭದಿಂದಲೂ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ದಲಿತ ಸಂಘಟನೆಗಳು ಬೃಹತ್ ಹೋರಾಟಗಳನ್ನು ನಡೆಸಿದ್ದರು. ಆದರೆ ಶ್ರೀಧರ ಅವರ ಕೊಲೆ ಪ್ರಕರಣದ ಆರೋಪಿಗಳು ಪತ್ತೆಯಾಗಲೇ ಇಲ್ಲ.ಪೊಲೀಸ್‌ ತನಿಖೆ ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ ಹರೀಶ್ ಮುಗೇರ ಎಂಬವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಕೊಂಡಿದ್ದರು. ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಬಳಿಕ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಅದರಂತೆ ಇದೀಗ ಡೈರೆಕ್ಟರ್ ಜನರಲ್‌ ಆಫ್‌ ಪೊಲೀಸ್‌ ಡಾ.ಎಂಎ ಸಲೀಂ ಅವರು ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

    Post Views: 62

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.