Facebook Twitter Instagram
    Thursday, October 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ
    ಇತ್ತೀಚಿನ ಸುದ್ದಿ

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026
    Share

    ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ  ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಎಂ.ಎ. ಸಲೀಂ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

    ಸೌಜನ್ಯ ಸಾವಿಗೆ ನ್ಯಾಯ ಕೋರಿ ಬೀದಿಗಿಳಿದಿರುವ ಸೌಜನ್ಯ ಪರ ಹೋರಾಟಗಾರರು ಹಾಗೂ ಕುಟುಂಬಸ್ಥರು ಎಸ್‌ಐಟಿ ನೇತೃತ್ವ ವಹಿಸಿರುವ ಐಜಿಪಿ ಶಶಿಕುಮಾರ್ ಅವರ ವಿರುದ್ಧ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದರು.

    ಶಶಿಕುಮಾರ್ ಈ ಹಿಂದೆ ಮಂಗಳೂರು ಕಮಿಷನರ್ ಆಗಿ ಕೆಲಸ ಮಾಡಿದ್ದರು. ಈ ವೇಳೆ ಧರ್ಮಸ್ಥಳದ ಜೊತೆಗೆ ಶಶಿಕುಮಾರ್ ಅವರಿಗೆ ಸಾಕಷ್ಟು ಒಡನಾಟ ಇತ್ತು. ಈ ವಿಚಾರ ಇಟ್ಟುಕೊಂಡು ಸೌಜನ್ಯ ಪರ ಹೋರಾಟಗಾರರು ಶಶಿಕುಮಾರ್ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ತನಿಖೆಯಿಂದ ನ್ಯಾಯ ಸಿಗುವ ಬಗ್ಗೆ ಅಪಸ್ವರ ಎತ್ತಿದ್ದ ಹೋರಾಟಗಾರರು, ಅವರ ಕಾರ್ಯವೈಖರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

    ಈ ವಿವಾದಗಳು ತನಿಖೆಯ ಪಾರದರ್ಶಕತೆಯ ಮೇಲೆ ಪರಿಣಾಮ ಬೀರಬಾರದು ಎಂಬ ಉದ್ದೇಶದಿಂದ, ಶಶಿಕುಮಾರ್ ಅವರೇ ಸ್ವಯಂಪ್ರೇರಿತರಾಗಿ ಪ್ರಕರಣದ ತನಿಖಾ ಹೊಣೆಯಿಂದ ತಮ್ಮನ್ನು ಕೈಬಿಡುವಂತೆ ಡಿಜಿಪಿಯವರಿಗೆ ವಿನಂತಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಐಜಿಪಿ ಶಶಿಕುಮಾರ್ ಅವರ ಮನವಿಯ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಉನ್ನತ ಮಟ್ಟದಲ್ಲಿ ಹೊಸ ಮುಖ್ಯಸ್ಥರ ನೇಮಕಕ್ಕೆ ಚಾಲನೆ ದೊರೆತಿದೆ. ಸದ್ಯ ಎಸ್‌ಐಟಿ ಮುಖ್ಯಸ್ಥ ಸ್ಥಾನಕ್ಕೆ ಮೂವರು ಪ್ರಮುಖ ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳು ಮುನ್ನೆಲೆಗೆ ಬಂದಿವೆ

    ತನಿಖೆಯನ್ನು ಅತ್ಯಂತ ನಿಷ್ಪಕ್ಷಪಾತವಾಗಿ ಹಾಗೂ ಚುರುಕಾಗಿ ಮುನ್ನಡೆಸಬಲ್ಲ ದಕ್ಷ ಅಧಿಕಾರಿಗೆ ಈ ಮಹತ್ವದ ಹೊಣೆಗಾರಿಕೆಯನ್ನು ವಹಿಸಲು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ. ಐಜಿಪಿಗಳಾದ ಲಾಭೂರಾಮ್, ಚೇತನ್ ಸಿಂಗ್ ರಾಥೋಡ್, ಡಾ. ಬೋರಲಿಂಗಯ್ಯ ಪೈಕಿ ಒಬ್ಬರಿಗೆ ಮುಖ್ಯಸ್ಥ ಸ್ಥಾನ ಸಿಗುವ ಸಾಧ್ಯತೆಯಿದೆ.

    Post Views: 1

    dakshina kannada karnataka PoliceInvestigation

    Related Posts

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.