ವಿಟ್ಲ : ಗುಡ್ಡ ಜರಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪದ ಕಾಯರಡ್ಕ ಎಂಬಲ್ಲಿ ನಡೆದಿದೆ.
ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಮೇಲಿನ ಗುಡ್ಡ ಜರಿದು ಬಿದ್ದಿದೆ. ಈ ವೇಳೆ ಇಬ್ಬರು ಕಾರ್ಮಿಕರು ಮಣ್ಣಿನೊಳಗೆ ಸಿಲುಕಿಕೊಂಡಿದ್ದರು.
ಮಣ್ಣಿನಡಿ ಸಿಲುಕಿದ ಕಾರ್ಮಿಕರನ್ನು ರಾಜೇಶ್ ನಾಯ್ಕ್ ಬಾಯಿಲ, ಉಮೇಶ್ ನಾಯ್ಕ್ ನೆಲ್ಲಿ ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳೀಯರು ರಕ್ಷಣೆ ಮಾಡಿ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಹೆಚ್, ಕಂದಾಯ ಅಧಿಕಾರಿ ವಿಜಯ್ ಭೇಟಿ ನೀಡಿದ್ದಾರೆ.